Advertisement

“ನಮ್ಮ ಕೊಡುಗೆ ಸಮಾಜಕ್ಕೇನು?: ಚಿಂತನೆ ಅಗತ್ಯ” -ಜೆರ್ರಿ ವಿನ್ಸೆಂಟ್‌ ಡಯಾಸ್‌

07:08 PM Mar 25, 2023 | Team Udayavani |

ಉಡುಪಿ: ಭಗವಂತ ‌ನಮಗೇನು ಕೊಟ್ಟದ್ದಾನೆ ಎನ್ನುದಕ್ಕಿಂತಲೂ ನಾವು ಸಮಾಜಕ್ಕೇನು ಕೊಡುಗೆ ಕೊಟ್ಟಿದ್ದೇವೆ ಎಂಬುದನ್ನು ತಿಳಿದುಕೊಳ್ಳಬೇಕು. ನಾವು ದುಡಿದ ಹಣದಲ್ಲಿ ಸ್ವಲ್ಪ ಅಂಶವನ್ನಾದರೂ ಬಡವರಿಗೆ ದಾನವಾಗಿ ನೀಡಿದಾಗ
ಭಗವಂತ ಇನ್ನಷ್ಟು ದುಡಿಮೆಗೆ ಅವಕಾಶ ಮಾಡಿಕೊಡುತ್ತಾನೆ ಎಂದು ಮಾಂಡವಿ ಬಿಲ್ಡರ್ಸ್‌ ಎಂಡಿ ಜೆರ್ರಿ ವಿನ್ಸೆಂಟ್‌ ಡಯಾಸ್‌ ಅಭಿಪ್ರಾಯಪಟ್ಟರು.

Advertisement

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಧ್ವಜಸ್ತಂಭ ಪ್ರತಿಷ್ಠಾಪನೆ, ಧೂಳಿಮಂಡಲ ಸೇವೆ, ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್‌ ಹೆಗ್ಡೆ, ಉಪಾಧ್ಯಕ್ಷರಾದ ವಸಂತ ರಾವ್‌, ಪದ್ಮಾ ರತ್ನಾಕರ, ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ಎ. ಸುವರ್ಣ, ಮತ್ಸೋದ್ಯಮಿ ಹರಿಯಪ್ಪ ಕೋಟ್ಯಾನ್‌, ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಪಣಿಯಾಡಿ ದೇಗುಲದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯರಾಘವ ರಾವ್‌, ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್‌, ಉಪಸ್ಥಿತರಿದ್ದರು.

ಸ್ಥಳೀಯ ಪ್ರತಿಭೆಗಳಿಂದ ವಿವಿಧ ಮನೋ ರಂಜನೆ, ಕಡಿಯಾಳಿ ಪರಿಸರದ ಯುವಕ ಯುವತಿಯರಿಂದ ಕಾಲಮಿತಿ ಯಕ್ಷಗಾನ ನಡೆಯಿತು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ಸ್ವಾಗತಿಸಿದರು. ಸಮಿತಿಯ ರಾಕೇಶ್‌ ಜೋಗಿ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next