Advertisement
ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ. ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ ಎಂದು ಪ್ರಶ್ನಿಸಿದ್ದಾರೆ.
Related Articles
Advertisement
ಸ್ವ ಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ದ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.