Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಈ ಭಾಗಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 250 ಕೋಟಿ ರೂ. ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆ ಅಭಿವೃದ್ಧಿಪಡಿಸಲಾಗಿದೆ. 30 ಗ್ರಾಪಂ ನೂತನ ಕಟ್ಟಡ ನಿರ್ಮಿಸಲಾಗಿದೆ. ಕಿರೇಸೂರ ಬಳಿ ಕೆರೆ ನಿರ್ಮಿಸಿ ಮಲಪ್ರಭಾ ನದಿ ನೀರನ್ನು ತುಂಬಿಸಿ ಕುಂದಗೋಳ ತಾಲೂಕಿನ 19 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಸುವರ್ಣಗ್ರಾಮ ಯೋಜನೆಗೆ 2 ಕೋಟಿ ರೂ. ನೀಡಲಾಗಿದೆ. ಗ್ರಾಮಗಳ ರಸ್ತೆಗಾಗಿ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಗೆ ಚಾಲನೆ ನೀಡಿ ರಸ್ತೆ ನಿರ್ಮಿಸಲಾಗಿದೆ. ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ಕಾಂಗ್ರೆಸ್ ಮುಖಂಡರು ಈಗ ಕ್ಷೇತ್ರದ ಅಭಿವೃದ್ಧಿ ಬಗ್ಗೆ, ಕ್ಷೇತ್ರ ದತ್ತು ಪಡೆಯುವ ಬಗ್ಗೆ ಮಾತನಾಡುತ್ತಿರುವುದನ್ನು ಕ್ಷೇತ್ರದ ಜನರು ನಂಬುವುದಿಲ್ಲ. ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದನ್ನು ತಿಳಿಸಲಿ ಎಂದರು.
Related Articles
Advertisement
ಕಾನೂನು ತಜ್ಞರು ಹೇಳಿಕೆ ನೀಡಲಿ: ಕುಂದಗೋಳ ಚುನಾವಣೆ ಪ್ರಚಾರ ಕೊನೆಗೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮಹದಾಯಿ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ನೋಟಿಫಿಕೇಶನ್ ನೀಡಿಲ್ಲ ಎಂದು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದ್ದಾರೆ. ಗೋವಾ ಸರಕಾರ ಪಿಟಿಷನ್ ಸಲ್ಲಿಸಿದ್ದರಿಂದ ನೋಟಿಫಿಕೇಶನ್ ನೀಡಲು ಬರುವುದಿಲ್ಲ. ಸರ್ವ ಪಕ್ಷ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಬೇಕೆಂದು ಹಲವು ಬಾರಿ ಹೇಳಿದರೂ ಅದಕ್ಕೆ ಸ್ಪಂದಿಸಿಲ್ಲ. ಮಹದಾಯಿ ಕುರಿತು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಸೃಷ್ಟಿಸದೇ ಕಾನೂನು ತಜ್ಞರು ಹೇಳಿಕೆ ನೀಡುವುದು ಸೂಕ್ತ ಎಂದು ಹೇಳಿದರು.
ಗೋಡ್ಸೆಗೂ ಬಿಜೆಪಿಗೂ ಸಂಬಂಧವಿಲ್ಲ: ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಗೋಡ್ಸೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವು ಎಂದಿಗೂ ಗೋಡ್ಸೆಯನ್ನು ಒಪ್ಪಿಕೊಂಡಿಲ್ಲ ಎಂದರು.
ಮುಂದಿನ ಮುಖ್ಯಮಂತ್ರಿ ನಾನೇ ಎಂದು ಪರಸ್ಪರ ಕಿತ್ತಾಡಿಕೊಳ್ಳುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಪತನವಾಗುವುದು ಶತಸಿದ್ಧ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ದೇವನೂರ ಗ್ರಾಮದಲ್ಲಿ ಶುಕ್ರವಾರ ರೋಡ್ ಶೋ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೂ ಎಂಬುದೇ ತಿಳಿಯುತ್ತಿಲ್ಲ. ಆಡಳಿತ ನಡೆಸಬೇಕಾದವರು ಅವರಿವರ ಕಾಲು ಎಳೆಯುವ ಕೆಲಸದಲ್ಲಿ ಮಗ್ನರಾಗಿದ್ದು, ನಾಡಿನಲ್ಲಿ ಸರಕಾರವೇ ಇಲ್ಲದಂತಾಗಿದೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ, ಹಲವಾರು ಜನಪರ ಯೋಜನೆಗಳನ್ನು ತರುವ ಮೂಲಕ ಎಲ್ಲರಿಗೂ ಸಮಪಾಲು-ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ಆಡಳಿತ ನೀಡಲಾಗಿತ್ತು. ಕುಂದಗೋಳ ಕ್ಷೇತ್ರದಲ್ಲಿ ಎಸ್.ಐ. ಚಿಕ್ಕನಗೌಡರ ಅತೀ ಹೆಚ್ಚು ಅಭಿವೃದ್ಧಿ ಕೆಲಸ ಮಾಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಆಡಳಿತ ನೀಡಿದ್ದರು. ಇದೀಗ ಮತ್ತೂಮ್ಮೆ ಅವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಗ್ರಾಮದ ಹಲವು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖಂಡರಾದ ಮಾ. ನಾಗರಾಜ, ಮಂಜುನಾಥ ಕುನ್ನೂರ, ರಂಗಾ ಬದ್ದಿ, ಶಿವಾನಂದ ಮುತ್ತಣ್ಣವರ ಇನ್ನಿತರರಿದ್ದರು.