Advertisement

Politics: ಸಮಾಜಕ್ಕೆ ರಾಜ್ಯ ಸರಕಾರದ ಸಂದೇಶ ಏನು?: ಜ್ಞಾನೇಂದ್ರ

11:19 PM Oct 06, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸರಕಾರ ಮತ್ತು ಡಿ.ಕೆ.ಶಿವಕುಮಾರ್‌ ಅವರು ತಮಗೆ ಮತ ಕೊಡುವ ಸಮಾಜ ದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೇನು ಸಂದೇಶ ಕೊಡುತ್ತಾರೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎಲ್ಲ ಮುಸ್ಲಿಮರು ಕೆಟ್ಟವರೆಂದು ನಾನು ಹೇಳುತ್ತಿಲ್ಲ; ಎಲ್ಲ ಹಿಂದೂಗಳು ಒಳ್ಳೆಯವರೆಂದು ಹೇಳುವುದಿಲ್ಲ. ಆದರೆ ಹಿಂದೂ ಮುಸ್ಲಿಮರ ನಡುವಿನ ಅಂತರ ಜಾಸ್ತಿ ಆಗಲು ಸರಕಾರದ ಕ್ರಮಗಳು ಕಾರಣ ಆಗಬಾರದು ಎಂದರು.

Advertisement

ಶಿವಮೊಗ್ಗ ಗಲಭೆ ಬಗ್ಗೆ ಡಿ.ಕೆ.ಶಿವಕುಮಾರ್‌ ಹೇಳಿಕೆಯನ್ನು ನೋಡಿದ್ದೇನೆ. ಯಾರು ಸಮಾಜವನ್ನು ಒಡೆಯುತ್ತಾರೋ, ಯಾರು ತಮ್ಮ ಚಟಕ್ಕೆ ಹಿಂದೂ ಮುಸ್ಲಿಮರ ನಡುವೆ ಗೋಡೆ ಕಟ್ಟುತ್ತಿದ್ಧಾರೆಂದು ದೇಶದ ಜನರಿಗೆ ಗೊತ್ತಿದೆ. ನಾನು ಗೃಹ ಸಚಿವನಾಗಿದ್ಧಾಗ ಹಳೆ ಹುಬ್ಬಳ್ಳಿಯಲ್ಲಿ ಕಾನೂನು ಕೈಗೆ ತೆಗೆದುಕೊಂಡ ಘಟನೆ ನಡೆದಿತ್ತು. ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಲು ಒಂದೂವರೆ ಸಾವಿರಕ್ಕಿಂತ ಹೆಚ್ಚು ಜನರು ಬಂದಿದ್ದರು. ಒಂದು ದೇವಸ್ಥಾನವನ್ನು ಹಾನಿಗೊಳಿಸಿದ್ದರು. ಪೊಲೀಸರು ಸ್ವಲ್ಪ ವ್ಯತ್ಯಾಸ ಆದರೂ ಹಳೆ ಹುಬ್ಬಳ್ಳಿ ಹೊತ್ತಿ ಉರಿಯುತ್ತಿತ್ತು ಎಂದು ತಿಳಿಸಿದರು.

ಇಂಥ ಸಂದರ್ಭದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಅಂಥ ಆರೋಪಿಗಳ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ಹೇಳುತ್ತಾರೆ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next