Advertisement

Politics: ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸಿದರೆ ತಪ್ಪೇನು?: ದಿನೇಶ್‌ ಗುಂಡೂರಾವ್‌

09:15 PM Feb 06, 2024 | Team Udayavani |

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ ಸಚಿವ ದಿನೇಶ್‌ ಗುಂಡೂರಾವ್‌, ಕೆಲವು ಆಂತರಿಕ ಚರ್ಚೆ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್‌ ನಿರ್ಧಾರ. ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧ. ಅವರು ಹೇಳಿದಾಗ ಸ್ಪರ್ಧೆ ಮಾಡಲೇಬೇಕು. ಇದು ಒಳ್ಳೆಯ ಬೆಳವಣಿಗೆ ಎಂದು ಸಮರ್ಥಿಸಿಕೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ಷಡ್ಯಂತ್ರ ರೂಪಿಸಿ, ಸರ್ಕಾರ ಬೀಳಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

Advertisement

ಕಾಂಗ್ರೆಸ್‌ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಗರಂ ಆದ ಅವರು, ಬಿಜೆಪಿ ಯಾವತ್ತೂ ದೇಶ ಕಟ್ಟುವ ಕೆಲಸ ಮಾಡಿಲ್ಲ. ಬ್ರಿಟಿಷರ ವಿರುದ್ಧ ಕಾಂಗ್ರೆಸ್‌ ಹೋರಾಡಿದಾಗ ಹಿಂದೂ ಮಹಾಸಭಾ ಬ್ರಿಟಿಷ್‌ ಹತ್ತಿರ ಇತ್ತು. ಪಾಕಿಸ್ತಾನವನ್ನು ಇಬ್ಭಾಗ ಮಾಡಿದ್ದು ನಾವೇ, ಅದನ್ನು ಹೊರತುಪಡಿಸಿ ಎಲ್ಲವನ್ನೂ ಒಗ್ಗೂಡಿಸಿದ್ದೇವೆ ಎಂದು ಹೇಳಿದರು.

ನವದೆಹಲಿಯಲ್ಲಿನ ಪ್ರತಿಭಟನೆ ಕುರಿತು ಸಮರ್ಥನೆ ಮಾಡಿಕೊಂಡ ಅವರು, ಅನಿವಾರ್ಯವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದು ಕರ್ನಾಟಕದ ಪರಿಸ್ಥಿತಿ ಮಾತ್ರವಲ್ಲ. ಬಿಜೆಪಿ ಸರ್ಕಾರ ಇಲ್ಲದ ಎಲ್ಲಾ ರಾಜ್ಯದ ಪರಿಸ್ಥಿತಿ ಇದೆ ಆಗಿದೆ. ಈ ಕಾರಣಕ್ಕಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next