Advertisement
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಅದನ್ನು ಮಕ್ಕಳಿಗೆ ತಿಳಿಸುತ್ತಿದ್ದೇವೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.
Related Articles
Advertisement
ಪಿಎಸ್ಐ ಅಕ್ರಮ ನೇಮಕಾತಿಯ ತನಿಖೆ ಬಗ್ಗೆ ವಿರೋಧ ಪಕ್ಷದವರಿಗೆ ತೃಪ್ತಿ ಇಲ್ಲದಿದ್ದರೆ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿ. ನಾವು ಯಾರನ್ನೂ ಬಿಟ್ಟಿಲ್ಲ. ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದೇವೆ. 40 ಜನರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆ ಮತ್ತು ತನಿಖೆ ಈಗಲೂ ನಡೆಯುತ್ತಿದೆ ಎಂದರು.
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ್ ಗುತ್ತೇದಾರ, ಶಶೀಲ್ ಜಿ. ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಇದ್ದರು.