Advertisement

ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ

01:07 PM May 16, 2022 | Team Udayavani |

ಕಲಬುರಗಿ: ರಾಜ್ಯದ ಪಠ್ಯಪುಸ್ತಕದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಕೇಶವ ಬಲಿರಾಮ ಹೆಡಗೆವಾರ್ ಅವರ ಭಾಷಣ ಸೇರ್ಪಡೆಯಾದರೆ ತಪ್ಪೇನು. ಅವರೊಬ್ಬ   ರಾಷ್ಟ್ರವಾದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ‌ಸಿ.ಟಿ. ರವಿ ಸಮರ್ಥಿಸಿಕೊಂಡರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಅದನ್ನು ಮಕ್ಕಳಿಗೆ ತಿಳಿಸುತ್ತಿದ್ದೇವೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.

ಪ್ರತಿ ಸರಕಾರ ಆಡಳಿತ ನಡೆಸುವ ದೂರದೃಷ್ಟಿ ಇಟ್ಟುಕೊಂಡಿರುತ್ತದೆ. ಬಿಜೆಪಿ ರಾಷ್ಟ್ರವಾದ ತತ್ವ ಮತ್ತು ಚಿಂತನೆ ಹೊಂದಿದೆ ಎಂದರು.

ಇದನ್ನೂ ಓದಿ:ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ ಪತ್ತೆ

ತ್ರಿಪುರಾದಲ್ಲಿ ಬದಲಾವಣೆಯಾದಂತೆ ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬದಲಾವಣೆ ‌ಆಗಲಿದೆಯೇ ಎಂಬ ಪ್ರಶ್ನೆಗೆ, ಇಲ್ಲ ಮುಂದಿ‌ನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಬೇಡವೋ‌ ಎಂಬುದನ್ನು ಅವರು ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದರು.

Advertisement

ಪಿಎಸ್ಐ ‌ಅಕ್ರಮ ನೇಮಕಾತಿಯ ತನಿಖೆ ಬಗ್ಗೆ ವಿರೋಧ ಪಕ್ಷದವರಿಗೆ ತೃಪ್ತಿ ಇಲ್ಲದಿದ್ದರೆ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿ. ನಾವು ಯಾರನ್ನೂ ಬಿಟ್ಟಿಲ್ಲ. ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದೇವೆ. 40 ಜನರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆ ಮತ್ತು ತನಿಖೆ ಈಗಲೂ ನಡೆಯುತ್ತಿದೆ ಎಂದರು.

ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ‌ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ್ ಗುತ್ತೇದಾರ, ಶಶೀಲ್ ಜಿ. ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next