Advertisement

ಹಳ್ಳಿ ಜನರಿಂದ ಉಳಿದಿದೆ ಸಂಸ್ಕೃತಿ-ಸಂಪ್ರದಾಯ

05:28 PM May 09, 2022 | Shwetha M |

ಬಸವನಬಾಗೇವಾಡಿ: ದೇಶದ ಶ್ರೀಮಂತಿಕೆ ಹೆಚ್ಚಿಸುವ ಜಾನಪದ ಕಲೆ, ಧಾರ್ಮಿಕ, ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಬಿ.ಎನ್‌. ಪಾಟೀಲ ಹೇಳಿದರು.

Advertisement

ರವಿವಾರ ತಾಲೂಕಿನ ಉತ್ನಾಳ ಗ್ರಾಮದಲ್ಲಿ ನಡೆದ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ಹೋಮ, ಮಹಾ ರುದ್ರಾಭಿಷೇಕ, ಸಹಸ್ರನಾಮಾವಳಿ, ಮಹಾಲಕ್ಷ್ಮೀ ಪಲ್ಲಕ್ಕಿ ಉತ್ಸವ, ಧರ್ಮಸಭೆ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಜಾತ್ರೆ, ಉತ್ಸವ, ಪುರಾಣ, ಪ್ರವಚನಗಳಂತ ಕಾರ್ಯಗಳನ್ನು ಮಾಡುವ ಮೂಲಕ ಜನರಲ್ಲಿ ನಮ್ಮ ದೇಶದ ಕಲೆ, ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಧಾರ್ಮಿಕ ಭಾವನೆಗಳನ್ನು ಜಾಗೃತಿಗೊಳಿಸುವ ಕೆಲಸ ಅನೇಕ ಮಠ ಮಂದಿರಗಳು ಮಾಡುತ್ತಿವೆ ಎಂದು ಹೇಳಿದರು.

ವಿಶ್ವಬಂಧು ಬಸವ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ| ಅಮರೇಶ ಮಿಣಜಗಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯಗೆ ಶಾಂತಿ ನೆಮ್ಮದಿಯು ಆಸ್ತಿ ಅಂತಸ್ತು, ಹಣ, ಐಶ್ವರ್ಯದಿಂದ ಸಿಗುವುದಿಲ್ಲ. ಮನುಷ್ಯನಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಹಿಂತ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.

ಸಿಂದಗಿ ಹಿರೇಮಠದ ಶಿವಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಶ್ರೀಮಠದ ಮಹಾಲಕ್ಷ್ಮೀ ದೇವಿ ಆರಾಧಕ ಶಿವಪುತ್ರಯ್ಯ ಸ್ವಾಮೀಜಿ, ತಾಳಿಕೋಟೆ ತಹಶೀಲ್ದಾರ್‌ ಅನಿಲಕುಮಾರ ಢವಳಗಿ, ನ್ಯಾಯವಾದಿ ವೀರಣ್ಣ ಮರ್ತೂರ, ಡಾ| ಸುನೀಲ ಪಾಟೀಲ, ಹೆಸ್ಕಾಂ ಅಧಿಕಾರಿ ಕುಮಾರೇಶ ಕಿರಸಾವಳಗಿ, ಎಸ್‌.ಎಂ. ಸಜ್ಜನ, ಚನ್ನಬಸವ ಶರಣಬಸು ಯಾಳಗಿ ಸೇರಿದಂತೆ ಅನೇಕರು ಇದ್ದರು.

Advertisement

ಕಾರ್ಯಕ್ರಮಕ್ಕೂ ಮುನ್ನ ನೂರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಪಲ್ಲಕ್ಕಿ ಉತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

Advertisement

Udayavani is now on Telegram. Click here to join our channel and stay updated with the latest news.

Next