ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಸ್ಥಾನಕ್ಕೆ ಬರೋಬ್ಬರಿ 24 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಗಾಂಧಿ ಕುಟುಂಬದ ನಿಷ್ಠ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಮತಗಳಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಸೋಲನ್ನುಭವಿಸಿದ್ದಾರೆ.
Advertisement
“ಇದೊಂದು ದೊಡ್ಡ ಗೌರವ ಮತ್ತು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ದೊಡ್ಡ ಜವಾಬ್ದಾರಿ ಹೊತ್ತಿರುವ ಖರ್ಗೆಜೀಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಪರಾಜಿತ ಅಭ್ಯರ್ಥಿ ಶಶಿ ತರೂರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.