ಲಕ್ನೋ: ಮಂಗಳವಾರದಂದು ಉತ್ತರ ಪ್ರದೇಶದ ಲಕ್ನೋದಲ್ಲಿ “ಮಣ್ಣು ಉಳಿಸಿ’ ಅಭಿಯಾನದ ಕಾರ್ಯಕ್ರಮ ನಡೆಸಿ ಕೊಟ್ಟಿರುವ ಸದ್ಗುರು ಜಗ್ಗಿ ವಾಸುದೇವ ಅವರು ಅದೇ ಸಮಯದಲ್ಲಿ ಉತ್ತರ ಪ್ರದೇಶ ಸರಕಾರದೊಂದಿಗೆ ಒಡಂಬಡಿಕೆಯೊಂದನ್ನು ಮಾಡಿಕೊಂಡಿದ್ದಾರೆ.
ಮಣ್ಣು ಉಳಿಸುವ ನಿಟ್ಟಿನಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಅದರ ಕೈಪಿಡಿಯನ್ನು ಸದ್ಗುರು ಅವರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಹಸ್ತಾಂತರಿಸಿದರು. ರಾಜ್ಯ ಸರಕಾರಗಳು ಮಣ್ಣು ಉಳಿಸಲು ವೈಜ್ಞಾನಿಕವಾಗಿ ಹಾಗೂ ಪ್ರಾಯೋಗಿಕವಾಗಿ ಮಾಡಬಹುದಾದ ಯೋಜನೆಯನ್ನು ಈ ಕೈಪಿಡಿಯಲ್ಲಿ ವಿವರಿಸಲಾಗಿದೆ.
ಈ ಹಿಂದೆ ರಾಜಸ್ಥಾನ ಸರಕಾರದೊಂದಿಗೂ ಸದ್ಗುರು ಅವರು ಇಂತದ್ದೇ ಒಡಂಬಡಿಕೆ ಮಾಡಿಕೊಂಡಿದ್ದರು.