ಪಂಜಾಬ್ : ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಖಲಿಸ್ತಾನ್ ಬೆಂಬಲಿಗ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸುವಲ್ಲಿ ವಿಫಲವಾಗಿರುವ ಪಂಜಾಬ್ ಸರ್ಕಾರವನ್ನು ಹರಿಯಾಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ರಾಜ್ಯದ 80,000 ಪೊಲೀಸರು ಏನು ಮಾಡುತ್ತಿದ್ದಾರೆ. ಪ್ರತ್ಯೇಕತಾವಾದಿ ನಾಯಕನನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ನ್ಯಾಯಾಲಯ, ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರಕ್ಕೆ ನಾಲ್ಕು ದಿನಗಳಲ್ಲಿ ಸ್ಥಿತಿ ವರದಿ ಸಲ್ಲಿಸುವಂತೆ ಹೇಳಿದೆ.
ಈ ಕುರಿತು ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯದಲ್ಲಿ ಶಾಂತಿಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಅಭಿವೃದ್ಧಿಯ ರಾಜಕಾರಣ ಮಾಡುತ್ತೇವೆಯೇ ಹೊರತು ಧರ್ಮದ ರಾಜಕೀಯವಲ್ಲ. ಪಂಜಾಬ್ ಪೊಲೀಸರು ಪರಾರಿಯಾಗಿರುವ ಖಲಿಸ್ತಾನ್ ಬೆಂಬಲಿಗ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಬೃಹತ್ ಕಾರ್ಯಾಚರಣೆ ಕೈಗೊಂಡಿದಿದೆ. ಶೀಘ್ರದಲ್ಲೇ ಅಮೃತ್ ಪಾಲ್ ಸಿಂಗ್ ನನ್ನು ಬಂಧನ ಮಾಡುತ್ತೇವೆ ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.
ಪಂಜಾಬ್ ಪೊಲೀಸರು ಈವರೆಗೆ ಅಮೃತಪಾಲ್ ಸಿಂಗ್ ನ 120 ಜನ ಬೆಂಬಲಿಗರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
Related Articles
ಸ್ಥಗಿತಗೊಳಿಸಿದ ನೆಟ್ ವರ್ಕ್ ಕಾರ್ಯಾರಂಭ
ಕಳೆದ ಎರಡು ದಿನಗಳಿಂದ ಪ್ರಮುಖ ನಗರಗಳಲ್ಲಿ ನೆಟ್ ವರ್ಕ್ ಕಾರ್ಯ ಸ್ಥಗಿತಗೊಳಿಸಲಾಗಿತ್ತು ಆದರೆ ಇಂದು ಮಧ್ಯಾಹ್ನದ ಬಳಿಕ ನೆಟ್ ವರ್ಕ್ ಸೇವೆ ಮತ್ತೆ ಕಾರ್ಯಾರಂಭಿಸಲಿದೆ ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ. ಅಷ್ಟು ಮಾತ್ರವಲ್ಲದೆ ಸಾರ್ವಜನಿಕರಿಗೆ ಆನ್ ಲೈನ್ ಸೇವೆಗಳನ್ನೂ ಮುಂದುವರೆಸಲು ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್ ಚಿತ್ತ!