Advertisement
ಬಡ ಹಾಗೂ ನಿರ್ಗತಿಕರ ಸೇವೆಗೆ ಸ್ಥಾಪನೆ ಮಾಡಲಾಗಿದೆ ಎನ್ನಲಾದ “ದಿ ರಾಬಿನ್ ಹುಡ್ ಪ್ರಾಜೆಕ್ಟ್ ಟ್ರಸ್ಟ್’ಗೆ ಸಂಬಂಧಿಸಿದ 10 ವಾಟ್ಸಪ್ ಗ್ರೂಪ್‌ಗಳ ಅಡ್ಮಿನ್ ಹಾಗೂ ಸದಸ್ಯ ಸ್ಥಾನದಿಂದ ತಮ್ಮನ್ನು ತೆಗೆದುಹಾಕಿದ ಕ್ರಮ ಆಕ್ಷೇಪಿಸಿ ಬೆಂಗಳೂರಿನ ಗುರಪ್ಪನಪಾಳ್ಯದ ನಿವಾಸಿ ಮೊಹಮ್ಮದ್ ಶರೀಫ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
Related Articles
Advertisement
ಪ್ರಕರಣವೇನು?“ದಿ ರಾಬಿನ್ ಹುಡ್ ಪ್ರಾಜೆಕ್ಟ್ ಟ್ರಸ್ಟ್ ‘ ತನ್ನ ಸ್ವಯಂ ಸೇವಕರ ಸದಸ್ಯತ್ವ ಹೊಂದಿದ 10 ವಾಟ್ಸಪ್ ಗ್ರೂಪ್ ರಚನೆ ಮಾಡಿಕೊಂಡಿದೆ. ಗ್ರೂಪಿನಲ್ಲಿ ಅರ್ಜಿದಾರ 2018ರ ಫೆಬ್ರವರಿಯಿಂದ ಸದಸ್ಯರಾಗಿದ್ದರು. ಎರಡೂವರೆ ವರ್ಷಕ್ಕಿಂತ ಹೆಚ್ಚು ಕಾಲ ಅಡ್ಮಿನ್ ಆಗಿದ್ದರು. ಈ ಮಧ್ಯೆ ಟ್ರಸ್ಟ್‌ಗೆ ಸೇರಿದ ಯುನೈಟೆಡ್ ಕಿಂಗ್‌ಡಮ್ (ಯುಕೆ) ತಂಡವು ವಿಚಾರವೊಂದರ ಸಂಬಂಧ ಅನಿಸಿಕೆ ಹಂಚಿಕೊಂಡಿತ್ತು. ಅದರ ಬಗ್ಗೆ ಮಾತನಾಡಿದ ಕಾರಣಕ್ಕೆ ಅರ್ಜಿದಾರನನ್ನು ಗ್ರೂಪಿನ ಅಡ್ಮಿನ್ ಸ್ಥಾನದಿಂದ ತೆಗೆದು ಹಾಕಲಾಗಿತ್ತು. ಸ್ವಲ್ಪ ದಿನದ ನಂತರ ಟ್ರಸ್ಟ್‌ಗೆ ಸಂಬಂಧಿಸಿದ ಯೋಜನೆಯ ಮಾಹಿತಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಹಂಚಿಕೊಂಡ ಆರೋಪದ ಮೇಲೆ 10 ವಾಟ್ಸಪ್ ಗ್ರೂಪ್‌ನಿಂದಲೂ ಅರ್ಜಿದಾರರನ್ನು ತೆಗೆದು ಹಾಕಲಾಗಿತ್ತು. ಅದನ್ನು ಆಕ್ಷೇಪಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ ಶರೀಫ್, ಟಸ್ಟ್ ಸಂಬಂಧಿಸಿದ ಯೋಜನೆ ಯಾವೊಂದು ಮಾಹಿತಿಯನ್ನು ತಾವು ಸಾರ್ವಜನಿಕ ವೇದಿಕೆಯಲ್ಲಿ ಹಂಚಿಕೊಂಡಿಲ್ಲ. ಸುಳ್ಳು ಆರೋಪ ಮಾಡಿ ವಾಟ್ಸಪ್ ಗ್ರೂಪಿನಿಂದ ನನ್ನನ್ನು ತೆಗೆದು ಹಾಕಲಾಗಿದೆ. ಆ ಮೂಲಕ ನನ್ನ ಮೂಲಭೂತ ಹಕ್ಕು ಅದರಲ್ಲೂ ವಾಕ್ ಸ್ವಾತಂತ್‌ರ್ಯವು ಹರಣ ಮಾಡಲಾಗಿದೆ. ಆದ್ದರಿಂದ ಮತ್ತೆ ವಾಟ್ಸ… ಗ್ರೂಪಿಗೆ ಸೇರಿಸಬೇಕು. ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿರುವುದಕ್ಕೆ ನಷ್ಟ ಪರಿಹಾರ ತುಂಬಿಕೊಡಲು ಟ್ರಸ್ಟ್ ಮತ್ತದರ ಸಂಸ್ಥಾಪಕರು, ಟ್ರಸ್ಟಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು