ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ ತಪ್ಪಿತಸ್ಥರನ್ನು ಪೊಲೀಸರು ಪತ್ತೆ ಮಾಡಲಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಟರ ಒತ್ತಡವಿಲ್ಲ. ಪಾರದರ್ಶಕ ತನಿಖೆಗಾಗಿ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ ಎಂದರು.
ಸಂತೋಷ್ ಕುಟುಂಬದವರ ಸಮ್ಮುಖದಲ್ಲೇ ಲಾಡ್ಜ್ ಕೊಠಡಿ ಬಾಗಿಲು ತೆರೆಯಲಾಗಿದೆ. ಮರಣೋತ್ತರ ಪರೀಕ್ಷೆಯನ್ನೂ ಮಾಡಲಾಗಿದೆ. ವಾಟ್ಸಪ್ ಡೆತ್ ನೋಟ್ ಈ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಇದನ್ನೂ ಓದಿ:ಈಶ್ವರಪ್ಪ ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಬೇಕಾಯಿತು: ಯಡಿಯೂರಪ್ಪ
ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಆರೋಪ ಸೇರಿದಂತೆ ಎಲ್ಲ ಸಂಗತಿ ತನಿಖೆಯಿಂದ ಬಯಲು ಮಾಡುತ್ತೇವೆ. ಈಶ್ವರಪ್ಪ ಆರೋಪ ಮುಕ್ತರಾಗಿ ಬರುತ್ತಾರೆ ಎಂದರು.