Advertisement

Wheeling: 10 ಪ್ರಕರಣ ದಾಖಲು,ಇಬ್ಬರು ಬೈಕ್‌ ಸವಾರರ ಬಂಧನ

11:30 AM Feb 25, 2024 | Team Udayavani |

ಬೆಂಗಳೂರು: ನಗರದಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುವವರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಪಶ್ಚಿಮ ಮತ್ತು ಪೂರ್ವ ವಿಭಾಗ ಸಂಚಾರ ಪೊಲೀಸರು 10 ಪ್ರತ್ಯೇಕ ಪ್ರಕರಣಗಳನ್ನು ದಾಖಸಿದ್ದಾರೆ.

Advertisement

ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್‌ ವ್ಹೀಲಿಂಗ್‌ ಮಾಡುವ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 8 ಪ್ರಕರಣ ದಾಖಲಿಸಿದ್ದಾರೆ. ಫೆ.22 ಮತ್ತು 23ರಂದು ನಡೆದ ವಿಶೇಷ ಕಾರ್ಯಾಚರಣೆ ವೇಳೆ ಕೆಂಗೇರಿ 03, ಬ್ಯಾಟರಾಯನಪುರ 02, ಕಾಮಾಕ್ಷಿಪಾಳ್ಯ, ಅಶೋಕನಗರ, ವಿಜಯನಗರ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ತಲಾ 1 ಸೇರಿ ಒಟ್ಟು 8 ಪ್ರಕರಣಗಳನ್ನು ದಾಖಲಿ ಸಲಾ ಗಿದ್ದು, 8 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ವ್ಹೀಲಿಂಗ್‌ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್‌ ತಿಳಿಸಿದ್ದಾರೆ.

ಇಬ್ಬರ ಬಂಧನ: ನಗರದ ಸುರಂಜನ್‌ದಾಸ್‌ ಮುಖ್ಯರಸ್ತೆಯಲ್ಲಿ ಅಪಾಯಕಾರಿಯಾಗಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಸವಾ ರರನ್ನು ಜೀವನಭೀಮಾನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೋಹಿತ್‌ ಕುಮಾರ್‌(21) ಮತ್ತು ವಿಘ್ನೇಶ್‌(19) ಬಂಧಿತರು. ಫೆ.23ರಂದು ಸಂಚಾರ ಪೊಲೀಸರು ವ್ಹೀಲಿಂಗ್‌ ಮಾಡುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಸುರಂಜನ್‌ದಾಸ್‌ ಮುಖ್ಯರಸ್ತೆಯಲ್ಲಿ  ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಸವಾರರನ್ನು ವಶಕ್ಕೆ ಪಡೆದು, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next