Advertisement
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರು ಮಾತ್ರ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲವಲ್ಲ ಎಂದು ಸರ್ಕಾರ ಚಿಂತಿಸಿ ಈ ಒಪ್ಪಂದಕ್ಕೆ ಸಹಿ ಹಾಕುತ್ತಿರಬಹುದೇ ಎಂದು ಪ್ರಶ್ನಿಸಿದರು.
Related Articles
Advertisement
ಮಾನವೀಯ ಸ್ಪಂದನೆ: ಇಥಿಯೋಪಿಯಾದ ಪ್ರಧಾನಿ ಅಹಮದ್, ಹಸಿವಿನಿಂದ ಎಲುಬಿನ ಗೂಡಾಗಿದ್ದ ದೇಶವನ್ನು ಎರಡೇ ವರ್ಷದಲ್ಲಿ ಯುದ್ಧವಿಲ್ಲದೆ ಎಲ್ಲವನ್ನು, ಎಲ್ಲರನ್ನೂ ಗೆದ್ದುಕೊಳ್ಳುತ್ತಾರೆೆ. ಇದಕ್ಕೆ 52 ಇಂಚಿನ ಎದೆಯಲ್ಲ, ಆ ಎದೆ ಒಳಗಿರುವ ಹೃದಯದೊಳಗೆ ಮಾನವೀಯ ಸ್ಪಂದನೆಗಳು ಬೇಕು ಅಷ್ಟೇ ಎಂದು ಹೇಳಿದರು.
ಆಹಾರ ಭದ್ರತೆ ಮೇಲೆ ಪರಿಣಾಮ: ಜನಾಂದೋಲನ ಮಹಾ ಮೈತ್ರಿಯ ಎಸ್.ಆರ್.ಹಿರೇಮಠ ಮಾತನಾಡಿ, ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಕೈಗಾರಿಕಾ ವಲಯ, ಆಹಾರ ಭದ್ರತೆ ಮೇಲೆ ಪರಿಣಾಮ ಬೀರುತ್ತದೆ. ಪ್ರಧಾನಿ ನರೇಂದ್ರ ಮೋದಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ವಿಷಯದಲ್ಲಿ ಸಮಗ್ರ ಪರಿಕಲ್ಪನೆ ಮೂಡಿದಂತಿಲ್ಲ ಎಂದರು.
ಅನುಮಾನಾಸ್ಪದ ನಡೆ: ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮುಕ್ತ ವ್ಯಾಪಾರವನ್ನು ಅಂತಾರಾಷ್ಟ್ರೀಯ ಒಪ್ಪಂದವನ್ನು ಸಂಸತ್ತಿನಲ್ಲಿ ಚರ್ಚೆ ಮಾಡದೆ ಕಂಪನಿ ವ್ಯವಹಾರದಂತೆ ಮಾಡಿಕೊಳ್ಳುತ್ತಿರುವುದು ಪ್ರಜಾತಾಂತ್ರಿಕ ನಡೆಯಲ್ಲ. ಆರೆಸ್ಸೆಸ್, ಸ್ವದೇಶಿ ಜಾಗರಣ ಮಂಚ್‌ನವರು ಈ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಅನುಮಾನ ಮೂಡಿಸಿದೆ. ಅವರಿಗೆ ನಿಜವಾದ ಕಾಳಜಿ ಇದ್ದಲ್ಲಿ ಬೀದಿಗಿಳಿದು ಹೋರಾಡಬೇಕಿತ್ತು ಎಂದರು.ಎಐಡಿವೈಒನ ಚಂದ್ರಶೇಖರ ಮೇಟಿ, ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಅಭಿರುಚಿ ಗಣೇಶ್ ಸುದ್ದಿಗೋಷ್ಠಿಯಲ್ಲಿದ್ದರು. ಇಂದು ದನಗಳ ನೇತೃತ್ವದಲ್ಲಿ ಪ್ರತಿಭಟನೆ
ಮೈಸೂರು: ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಗುರುವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದನಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಮೈಸೂರಿನಲ್ಲಿ ಬೆಳಗ್ಗೆ 11ಗಂಟೆಗೆ ನಗರದ ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ದನಗಳ ಮೆರವಣಿಗೆ ನಡೆಸಿ ಪ್ರತಿಭಟನಾ ಸತ್ಯಾಗ್ರಹ ನಡೆಸಲಾಗುವುದು, ನಮ್ಮ ಈ ಹೋರಾಟಕ್ಕೆ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಕೂಡ ಕೈಜೋಡಿಸಿದೆ ಎಂದು ತಿಳಿಸಿದರು.