Advertisement

ಕಣಂಜಾರು-ಗುಡ್ಡೆಯಂಗಡಿ ರಸ್ತೆ ದುರಸ್ತಿ ಯಾವಾಗ?

06:55 AM Mar 26, 2018 | |

ಕಾರ್ಕಳ: ಕಣಂಜಾರು-ಗುಡ್ಡೆಯಂಗಡಿ ಸಂಪರ್ಕ ಕೊಂಡಿಯಾಗಿರುವ ನೀರೆ ಕಣಜಾರು ಪಂಚಾಯತ್‌ ವ್ಯಾಪ್ತಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ಸಾಧ್ಯವಾಗದ ಸ್ಥಿತಿಯಲ್ಲಿದೆ. ಈ ಭಾಗದ ರಸ್ತೆಯ ದುರಸ್ತಿ ಕಾರ್ಯಕ್ಕೆ ಹಲವು ಬಾರಿ ಮನವಿ ಮಾಡಿದರೂ ದುರಸ್ತಿ ಕಾರ್ಯ ನಡೆದಿಲ್ಲ.

Advertisement

ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ರಸ್ತೆಯಲ್ಲಿ ಹೊಂಡಗುಂಡಿಗಳು ತುಂಬಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಆ ಭಾಗದ ನೂರಾರು ವಿದ್ಯಾರ್ಥಿಗಳು, ಉದ್ಯೋಗಸ್ಥರು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದೆ. ಆದರೆ ಈ ರಸ್ತೆಯ ಅಭಿವೃದ್ಧಿಗಾಗಿ ಮಾತ್ರ ಜನತೆ ಚಾತಕ ಪಕ್ಷಿಯಂತೆ ಕಾಯುವ ಹಾಗಾಗಿದೆ.

ರಸ್ತೆ ನಿರ್ಮಾಣಕ್ಕೆ ರಾಜಕೀಯ ದ್ವೇಷ ಕಾರಣವೋ ಅಥವಾ ಗ್ರಾಮದ ನಿರ್ಲಕ್ಷ್ಯವೋ ಎನ್ನುವುದು ಗ್ರಾಮಸ್ಥರಿಗೆ ತೋಚದಾಗಿದೆ. ಮಳೆಗಾಲದಲ್ಲಂತೂ ಪಾದಚಾರಿಗಳೂ ಈ ರಸ್ತೆಯಲ್ಲಿ ನಡೆದಾಡುವುದು ಕಷ್ಟವಾಗಿದೆ. ಹೀಗಾಗಿ ಜನಪ್ರತಿನಿಧಿಗಳು ಇನ್ನು ಮುಂದೆಯಾದರೂ ಈ ರಸ್ತೆಯ ಅಭಿವೃದ್ಧಿಗೆ ಗಮನ ಹರಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎನ್ನುವುದು ಗ್ರಾಮಸ್ಥರ ಆಶಯ.   
– ಗ್ರಾಮಸ್ಥರು ಕಣಂಜಾರು

Advertisement

Udayavani is now on Telegram. Click here to join our channel and stay updated with the latest news.

Next