Advertisement

ಅರಿವು ಮೂಡಿದಾಗ ಯೋಜನೆ ಯಶಸಿ

03:37 PM Oct 03, 2017 | Team Udayavani |

ಯಾದಗಿರಿ: ರಾಜ್ಯ ಸರಕಾರ ಅನೇಕ ಜನಪರ ಯೋಜನೆ ಜಾರಿಗೊಳಿಸಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Advertisement

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಮಾತೃಪೂರ್ಣ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅದನ್ನು ಅಧಿಕಾರಿಗಳು ಬೇರು ಮಟ್ಟದಿಂದ ಕೆಲಸ ಮಾಡಿದಾಗ ಮಾತ್ರ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಸರಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಸೇರಿದಂತೆ ಅನೇಕ ಜನಪರ ಯೋಜನೆಗಳು ಜಾರಿಗೊಳಿಸಲಾಗಿದ್ದು, ಕಾಗದಲ್ಲಿಯೇ ಉಳಿದಿದೆ. ಆದರೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಇದಕ್ಕೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯೇ ಕಾರಣ. ಆದ್ದರಿಂದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಎಂದರು. 

ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಪೂರ್ಣ ಯೋಜನೆ ಇದೊಂದು ಕ್ರಾಂತಿಯಾಗಿದೆ. ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆ ನಿವಾರಿಸಲು ಈ ಯೋಜನೆ ಜಾರಿಗೊಂಡಿದ್ದು, ಅಂಗನವಾಗಿ ಕೇಂದ್ರದಲ್ಲಿ ಮಧ್ಯಾಹ್ನದ ಪೌಷ್ಟಿಕ ಬಿಸಿ ಊಟವನ್ನು ಒದಗಿಸಲಾಗುತ್ತಿದ್ದು, ಬಾಣಂತಿಯರು ಹಾಗೂ ಗರ್ಭಿಣಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. 

ಸರಕಾರಗಳು ಯೋಜನೆಗಳನ್ನು ಜಾರಿಗೊಳಿಸಿದರೆ ಅದನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಜನರ ಜವಾಬ್ದಾರಿ ಮಹತ್ವದ್ದಾಗಿದೆ. ಜನರಲ್ಲಿ ಯೋಜನೆಗಳ ಕುರಿತು ಅರಿವು ಬಂದಾಗ ಮಾತ್ರ ಯೋಜನೆಗಳು ಯಶಸ್ವಿಗೊಳ್ಳುತ್ತವೆ ಎಂದು ತಿಳಿಸಿದರು.

Advertisement

ಜಿಲ್ಲಾಧಿಕಾರಿ ಮಂಜುನಾಥ ಜೆ ಮಾತನಾಡಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಜಿಲ್ಲೆ ಬಹಳಷ್ಟು ಹಿಂದುಳಿದಿದೆ. ಮಾತೃಪೂರ್ಣ ಯೋಜನೆ ಯಾದಗಿರಿ ಜಿಲ್ಲೆಗೆ ಮಹತ್ವದ ಯೋಜನೆಯಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಟಿಕತೆ ನಿವಾರಣೆ, ಶಿಶು ಹಾಗೂ ತಾಯಿ ಮರಣ ತಡೆಯುವುದು, ಮಹಿಳೆಯರಲ್ಲಿ ಆರೋಗ್ಯದ ದೃಷ್ಟಿಯಿಂದ ಸರಕಾರ ಈ ಯೋಜನೆ ಜಾರಿಗೊಳಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ಬಸರೆಡ್ಡಿ ಅನಪುರ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಎಸ್ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಜಿಪಂ ಸದಸ್ಯೆ ರಾಜೇಶ್ವರಿ, ನಗರಸಭೆ ಉಪಾಧ್ಯಕ್ಷೆ ಸ್ಯಾಮಸನ್‌ ಮಾಳಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶರಣಪ್ಪ ಪಾಟೀಲ್‌ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next