Advertisement

ಬಿಜೆಪಿ ಸರ್ಕಾರ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತಿದೆ: ಯು.ಟಿ.ಖಾದರ್

02:05 PM Nov 29, 2020 | keerthan |

ಮಂಗಳೂರು: ನಗರದಲ್ಲಿ ವಿವಾದಾತ್ಮಕ ಗೋಡೆ ಬರಹ ಬರೆಯುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಇವರಿಗೆ ಬೆಂಬಲವಾಗಿರುವರನ್ನು ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಆಗ್ರಹಿಸಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಮತ್ತೆ ಮತ್ತೆ ಹೀಗ್ಯಾಕೆ ಅಗುತ್ತಿದೆ? ಬರೆದವರನ್ನ ಪತ್ತೆ ಹಚ್ಚಿ ಅವರನ್ನು ಬೇರೆ ದೇಶಕ್ಕೆ ಬಿಟ್ಟು ಬರಬೇಕು, ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ, ಬಿಜೆಪಿ ಸರ್ಕಾರ ಬಂದಾಗ ಸಮಾಜದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತಿದೆ. ಇದಕ್ಕೆ ಜಿಲ್ಲೆಯ ಸಂಸದರು, ಶಾಸಕರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

ಘಟನೆಯ ಬಗ್ಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಒಂದು ವಾರದೊಳಗೆ ಈ ಆರೋಪಿಗಳ ಪತ್ತೆಯಾಗಬೇಕು. ಆರೋಪಿಗಳು ಮಾನಸಿಕ ಅಸ್ವಸ್ಥರೇ ಆಗಿರಲಿ, ಯಾರೇ ಆಗಿರಲಿ ಅರೆಸ್ಟ್ ಆಗಬೇಕು. 15 ದಿನದ ಒಳಗೆ ಬಂಧನವಾಗದೇ ಇದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next