Advertisement

ಚುನಾವಣೆ ಬಂದಾಗ ಬಿಜೆಪಿಗೆ ರಾಮನ ನೆನಪು 

12:30 AM Mar 14, 2019 | |

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರಿಗೆ ರಾಮ ನೆನಪಾಗುತ್ತಾನೆ. ಐದು ವರ್ಷ ಅಧಿಕಾರದಲ್ಲಿದ್ದಾಗ ಏಕೆರಾಮ ಮಂದಿರ ಕಟ್ಟಲಿಲ್ಲ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್‌ ಆಳ್ವಾ ಪ್ರಶ್ನಿಸಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೆಪಿಸಿಸಿ ಮಹಿಳಾ ಘಟಕ ಏರ್ಪಡಿಸಿದ್ದ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರದಲ್ಲಿದ್ದರೆ, ಧರ್ಮ, ರಾಜಕೀಯ, ಭಾಷೆಯನ್ನು ಕೆಡಿಸುತ್ತಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಹಾಳು ಮಾಡುತ್ತಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಹಿಳೆಯರು ಅಂಗೈಗೆ ಪಿಂಕ್‌ ಬಣ್ಣ ಬಳಿದುಕೊಂಡು ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕೊಡಬೇಕೆಂದು ಆಗ್ರಹಿಸಿದರು. ಲೋಕಸಭೆ ಚುನಾವಣೆ ದೃಷ್ಠಿಯಿಂದ ಮಹಿಳಾ ಘಟಕದಲ್ಲಿ ವಿವಿಧ ವಿಭಾಗಗಳನ್ನು ರಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next