Advertisement

ಅವನು ಯೋಗಿ ಅಲ್ಲ, ಬೋಗಿ..ಅವನಿಗೆ ಚಪ್ಪಲಿಯಲ್ಲಿ ಹೊಡೆಯಬೇಕು : ಠಾಕ್ರೆ ವಿರುದ್ಧ ಬಿಜೆಪಿ ದೂರು

06:33 PM Aug 26, 2021 | Team Udayavani |

ನವ ದೆಹಲಿ  : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು (ಮಂಗಳವಾರ, ಆಗಸ್ಟ್ 24) ಬಂಧಿಸಿದ ಬೆನ್ನಿಗೆ ಈಗ ಬಿಜೆಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ.

Advertisement

2018 ರಲ್ಲಿ ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ಈ ವಿಚಾರವನ್ನು ಉಲ್ಲೇಖಿಸಿ ಉದ್ಧವ್ ಠಾಕ್ರೆ ಶಿವಾಜಿಗೆ ಅವಮಾನಗೈದ ಯೋಗಿ ಆದಿತ್ಯನಾಥ್‌ ಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಠಾಕ್ರೆ ಹೇಳಿಕೆ ನೀಡಿದ್ದರು ಎಂದು ಬಿಜೆಪಿ ಠಾಕ್ರೆ ವಿರುದ್ಧ ದೂರು ದಾಖಲಿಸಿದೆ ಎಂದು ವರದಿ ಆಗಿದೆ. ಈ ಸಂದರ್ಭದಲ್ಲಿ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರಲಿಲ್ಲ.

 ಇದನ್ನೂ ಓದಿ : ಕಾಸರಗೋಡು ಜಿಲ್ಲೆಯ 30 ಪ್ರದೇಶಗಳು ಮೈಕ್ರೋ ಕಂಟೈನ್ಮೆಂಟ್‌ ಝೋನ್ : ಜಿಲ್ಲಾಧಿಕಾರಿ

ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್‌ ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ ಎಂದು ವರದಿಯಾಗಿದೆ.

ದೂರಿನಲ್ಲಿ ಠಾಕ್ರೆ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ರಾಜ್ಯದ ಮುಖ್ಯಮಂತ್ರಿ ಮಾತ್ರ ಅಲ್ಲ, ಗೋರಖ್‌ಪುರ ಪೀಠದ ಮುಖ್ಯಸ್ಥರಾಗಿದ್ದಾರೆ. ಈ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಅಷ್ಟೇ ಅಲ್ಲದೇ ಅವರು ಮುಖ್ಯಮಂತ್ರಿ ಆಗಿದ್ದು, ಸಾಂವಿಧಾನಿಕ ಹುದ್ದೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಎಫ್ ಐ ಆರ್ ದಾಖಲಾಗಬೇಕೆಂದು ಒತ್ತಾಯಿಸಿದೆ.

Advertisement

ಈಗಾಗಲೇ ಸಿಎಂ ಠಾಕ್ರೆ ವಿರುದ್ಧ ಮೂರು ದೂರುಗಳು ನಾಸಿಕ್‌ ನಲ್ಲಿ ದಾಖಲಾಗಿರುವುದನ್ನು  ಖಚಿತಪಡಿಸಿದ್ದಾರೆ.

ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ನನಗೆ ಅದೇ ಚಪ್ಪಲಿಗಳಿಂದ ಅವನ ಮುಖಕ್ಕೆ ಹೊಡೆಯಬೇಕು ಅನನ್ನಿಸಿತ್ತು. ಆತ ಯೋಗಿಯಲ್ಲ, ಆತ ಭೋಗಿ. ಅವನು ಯೋಗಿಯಾಗಿದ್ದಿದ್ದರೆ, ಅವನು ಎಲ್ಲವನ್ನೂ ಬಿಟ್ಟು ಗುಹೆಯಲ್ಲಿ ಹೋಗಿ ಕುಳಿತುಕೊಳ್ಳುತ್ತಿದ್ದನು. ಆದರೆ ಅವರು ಸಿಎಂ ಕುರ್ಚಿಯಲ್ಲಿ ಹೋಗಿ ಕುಳಿತಿದ್ದಾರೆ “ಎಂದು ಉದ್ಧವ್ ಯೋಗಿ ವಿರುದ್ಧ ಹೇಳಿಕೆ ನೀಡಿದ್ದರು.

ಇದನ್ನೂ ಓದಿ :  ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ ? : ದಿನೇಶ್ ಗುಂಡೂರಾವ್ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next