Advertisement
ಸಂಪುಟ ಸಭೆಯಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಘಟಾನುಘಟಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾರೀ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನವೆಂಬರ್ 25ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು ಬಿಜೆಪಿ ಮುಂದೂಡಿತ್ತು.
ಬಿಜೆಪಿ ಮೂಲಗಳು ಯಾವುದೇ ಪ್ರತಿಕ್ರಿಯೆ ನೀಡಲು ತಯಾರಿಲ್ಲ. ಎಲ್ಲರೂ ಬರ ಪ್ರವಾಸದಲ್ಲಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿಲ್ಲ ಎಂಬ ಹಾರಿಕೆ ಉತ್ತರ ಲಭಿಸಿದ್ದು, ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡೀತೆ? ಅಥವಾ ಶಸ್ತ್ರತ್ಯಾಗ ಮಾಡೀತೇ? ಎಂಬ ಅನುಮಾನಕ್ಕೆ ಬಲ ನೀಡಿದಂತಾಗಿದೆ.