Advertisement

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

01:21 AM Apr 26, 2024 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ ನಿಮ್ಮ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ನೀಡಲು ಬಿಡುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಜೈರಾಂ ರಮೇಶ್‌, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಎಲ್ಲಿ ಸಂಪತ್ತಿನ ಮರುಹಂಚಿಕೆ ಬಗ್ಗೆ ಹೇಳಲಾಗಿದೆ? ನಾವೆಲ್ಲಿ ಮಂಗಳಸೂತ್ರ ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದೇವೆ? ಯಾರು ಮಂಗಳಸೂತ್ರಕ್ಕೆ ಗೌರವ ಕೊಡುವುದಿಲ್ಲವೋ, ಅವರೇ ಅದರ ಬಗ್ಗೆ ಮಾತಾಡುತ್ತಿದ್ದಾರೆ ಎಂದಿದ್ದಾರೆ.

Advertisement

ಮೋದಿ ಅಸತ್ಯಮೇವ ಜಯತೇಗೆ ಸಂಕೇತವಾಗಿದ್ದಾರೆ. ಅವರು ಸುಳ್ಳು ಹೇಳುವುದರ ಮೂಲಕ ದೇಶದ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಮೇಶ್‌ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next