ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.
Advertisement
ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರಗಿ-ಬಳ್ಳಾರಿ, ಮಹಾನಗರ ಪಾಲಿಕೆ, ಶಿಶು ಅಭಿವೃದ್ಧಿ ಯೋಜನೆ (ನಗರ), ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮತ್ತು ಪೂರ್ವ ಮಹಾವಿದ್ಯಾಲಯ, ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಸಂಯುಕ್ತ ಪದವಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸ್ವತ್ಛಭಾರತಅಭಿಯಾನ (ನಗರ) ಕಾರ್ಯಕ್ರಮ ಮತ್ತು ಜಾಥಾ ಉದ್ಗಾಟಿಸಿ ಅವರು ಮಾತನಾಡಿದರು. ಸ್ವತ್ಛ ಪರಿಸರದಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ. ಅದಕ್ಕಾಗಿ ಎಲ್ಲರೂ ಸ್ವತ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ಜಿಪಂ ಜಿಲ್ಲಾ ಸಂಯೋಜಕಿ ಗುರುಬಾಯಿ ಪಾಟೇಲ ಮಾತನಾಡಿ, ನಾವೆಲ್ಲರೂ ಸ್ವತ್ಛ ಪರಿಸರ ನಿರ್ಮಿಸಬೇಕಾದರೆ ಪ್ರತಿಯೊಂದು ಕುಟುಂಬದವರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಂಡು ಸ್ವತ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು. ಕಲಬುರಗಿ ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಸಂಯುಕ್ತ ಪದವಿ ಕಾಲೇಜಿನ ಪ್ರಚಾರ್ಯ ಬಿ.ಸಿ. ಚವ್ಹಾಣ, ಗೋದುತಾಯಿ ದೂಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ನೀಲಾಬಿಕಾ ಪೊಲೀಸ್ ಪಾಟೀಲ ಸ್ವತ್ಛ ಭಾರತ ಅಭಿಯಾನ ಮತ್ತು ಪರಿಸರ ಸಂರಕ್ಷಣಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿನಿಯರಿಗೆ ಭಾಷಣ, ರಂಗೋಲಿ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Related Articles
Advertisement