Advertisement

ಸರ್ಕಾರಿ ಶಾಲೆ ಮುಚ್ಚಿದರೆ ಮಕ್ಕಳು ಎಲ್ಲಿ ಓದಬೇಕು?

12:22 PM Jul 10, 2018 | |

ಮೈಸೂರು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ ಸೇರಿದ ದಸಂಸ ಪದಾಧಿಕಾರಿಗಳು, ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ ಬಡವರ್ಗದ ಜನತೆಯ ಮಕ್ಕಳು ವಿದ್ಯಾಭ್ಯಾಸಕ್ಕೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ‌ರು.

Advertisement

ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಪಾವತಿಸಿ ಬಡ ವರ್ಗದ ಜನರು ತಮ್ಮ ಮಕ್ಕಳನ್ನು ಓದಿಸಲಾಗುವುದಿಲ್ಲ. ಹೀಗಾಗಿ ಸರ್ಕಾರ ಶಾಲೆಗಳನ್ನು ಮುಚ್ಚದೆ ಉಳಿಸಿಕೊಡಬೇಕು ಎಂದು ಒತ್ತಾಯಿಸಿದರು. ಹೆಚ್ಚು ಮಕ್ಕಳು ಬಾರದ ಸರ್ಕಾರಿ ಶಾಲೆಗಳನ್ನು ಮುಚ್ಚುವುದಾಗಿ ಸರ್ಕಾರ ಬಜೆಟ್‌ನಲ್ಲಿ ಹೇಳಿರುವುದು ಖಂಡನೀಯ.

ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿದು ಸರ್ಕಾರಿ ಶಾಲೆಗಳನ್ನು ಉಳಿಸಲು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಈ ಮೂಲಕ ಎಲ್ಲಾ ವರ್ಗದ ಬಡಜನರ ಮೂಲಭೂತ ಹಕ್ಕಾದ ಶಿಕ್ಷಣದ ಉಳಿವಿಗೆ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

28847 ಸರ್ಕಾರಿ ಹಾಗೂ 8530 ಅನುದಾನಿತ ಶಾಲೆಗಳೊಂದಿಗೆ ಮಕ್ಕಳು ಬಾರದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಹೊರಟಿರುವುದು ಶೈಕ್ಷಣಿಕವಾಗಿ ಆತ್ಮಹತ್ಯೆ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಜಿಲ್ಲಾ ಖಜಾಂಚಿ ಕೆ.ವಿ.ದೇವೇಂದ್ರ, ಮಂಡಕಳ್ಳಿ ಮಹೇಶ, ಜಿಲ್ಲಾ ಸಂಘಟನಾ ಸಂಚಾಲಕರಾದ ಕುಮಾರ್‌ ಕರಡೀಪುರ, ಕಿರಂಗೂರು ಸ್ವಾಮಿ, ಚೆಲುವರಾಜು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next