ನವದೆಹಲಿ: ಇಡೀ ದೇಶವೇ ಶ್ರೀರಾಮನ ಭಕ್ತಿಯಲ್ಲಿ ಮುಳುಗಿರುವ ನಡುವೆಯೇ ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿತ ಪ್ರತಿಪಕ್ಷಗಳ ಕೆಲವು ನಾಯಕರು ಆಗಮಿಸಿರಲಿಲ್ಲ.
ಮಂದಿರ ಲೋಕಾರ್ಪಣೆ ಸಮಾರಂಭವು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕ್ರಮವಾಗಿದ್ದು, ಸಮಾರಂಭದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿ ಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕ ಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ.
ಇದೇ ರೀತಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕೂಡ ಪ್ರಾಣಪ್ರತಿಷ್ಠಾಪನೆ ಸಮಾರಂಭ ರಾಜಕೀಯ ಕಾರ್ಯಕ್ರ ಮವಾಗಿ ಬದಲಾಗಿರುವುದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿತ್ತು. ಪಶ್ಚಿಮ ಬಂಗಾಳ ದಾದ್ಯಂತ ಟಿಎಂಸಿ ಸರ್ವ ಧರ್ಮ ಸಮ ನ್ವಯ ರ್ಯಾಲಿ ಹಮ್ಮಿಕೊಂಡಿತ್ತು. ಸೋಮ ವಾರ ಕೋಲ್ಕತ್ತಾದಲ್ಲಿ ನಡೆದ ರ್ಯಾಲಿಯಲ್ಲಿ ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿವಿಧ ಧರ್ಮಗಳ ಗುರುಗಳು, ಸಂತರು ಭಾಗವಹಿಸಿದ್ದರು.
ರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಲ್ಲಿ ಅಮ್ ಆದ್ಮಿ ಪಕ್ಷವು ಶ್ರೀರಾಮನ ಕುರಿತ ಅನೇಕ ಕಾರ್ಯಕ್ರಮಗಳನ್ನು, ಶೋಭಾ ಯಾತ್ರೆಯನ್ನು ಆಯೋಜಿಸಿತ್ತು. ದೆಹಲಿಯ ರಾಮ ಮಂದಿರಕ್ಕೆ ಸೋಮವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದರು. ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯು ಸ್ಪೀಡ್ ಪೋಸ್ಟ್‌ನಲ್ಲಿ ಬಂದಿದ್ದಕ್ಕೆ ಕೋಪಗೊಂಡಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಸಮಾರಂಭದಲ್ಲಿ ಭಾಗಿಯಾಗಲಿಲ್ಲ.
ಇದೇ ವೇಳೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್, ಎನ್‌ಸಿಪಿ ಸಂಸ್ಥಾಪಕ ಶರದ್ ಯಾದವ್ ಮುಂದಿನ ದಿನಗಳಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.