Advertisement

ಆದಾಯ ಮಿತಿಯಲ್ಲೇ ಯೋಜನೆಗಳಿರಲಿ

03:29 PM Aug 11, 2021 | Team Udayavani |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸಬೇಕು. ಅವಾಸ್ತವಿಕ ಯೋಜನೆಗಳಿಗೆ ಸಾಧ್ಯವಾದಷ್ಟು ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರು ಸಚಿವರು ಹಾಗೂ ಹಿರಿಯ ಅಧಿಕಾರಿ
ಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ನಗರದ ಅಭಿವೃದ್ಧಿಯ ಯೋಜನೆಗಳ ಅನುಷ್ಠಾನ ಇನ್ನಷ್ಟು ಚುರುಕುಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾ ಚಾರಕ್ಕೆ ಆಸ್ಪದ ನೀಡಬಾರದು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೈಗೆತ್ತಿಕೊಂಡಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರಿಸಬೇಕು ಎಂದ ಅವರು, ಬಿಬಿಎಂಪಿಯನ್ನು “ವಿತ್ತೀಯ ಹೊಣೆಗಾರಿಕೆ ಕಾಯ್ದೆ’ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ತನ್ನ ವಾರ್ಷಿಕ ಆದಾಯ ಮಿತಿಯೊಳಗೆ ವಾಸ್ತವಿಕ ಸ್ಥಿತಿಗತಿಯನ್ನು ಆಧರಿಸಿ ಯೋಜನೆಗಳನ್ನು ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರತ್ಯೇಕ ಪ್ರಾಧಿಕಾರ: ನಗರದ ಪ್ರಮುಖ ಮತ್ತು ಉಪ ಪ್ರಮುಖ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು. ನಗರದಾದ್ಯಂತ ಸುಮಾರು 860 ಕಿ.ಮೀ.
ಆರ್ಟಿರಿಯಲ್‌ ಮತ್ತು ಸಬ್‌-ಆರ್ಟಿರಿಯಲ್‌ ರಸ್ತೆಗಳಿವೆ. ಇವುಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಮತ್ತು ಸಂಚಾರ ನಿರ್ವಹಣೆ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದ ಅವರು, ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈಓವರ್‌ಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:3 ದಿನ ಮುಳುಗಿದ್ದ ನಾನಕರು ಎದ್ದು ಬಂದ್ರು !

Advertisement

ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ ಅಥವಾ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡುವಂತೆ ಸೂಚಿಸಲಾಯಿತು. ಅಕ್ಟೋಬರ್‌ ಒಳಗೆ ಮೂರನೇಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ
ಸಲ್ಲಿಸಬೇಕು. ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಬೇಕು ಎಂದರು.

ಬೆಂಗಳೂರು ಅಭಿವೃದ್ಧಿಯ ವಿಚಾರದಲ್ಲಿ ಸಚಿವರೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿ ಸಲಾಗುವುದು. ಒಟ್ಟಾಗಿ ಕುಳಿತು ಚರ್ಚಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಶಾಸಕರ ಅಭಿಪ್ರಾಯಗಳನ್ನೂ ಪರಿಗಣಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿ ಸಲಾಗುವುದು ಎಂದು ತಿಳಿಸಿದರು.

ಸಚಿವರಾದ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಆರ್‌. ಅಶೋಕ್‌, ಅರಗ ಜ್ಞಾನೇಂದ್ರ, ಎಸ್‌.ಟಿ. ಸೋಮಶೇಖರ್‌, ಬಿ.ಎ. ಬಸವರಾಜ (ಬೈರತಿಬಸವರಾಜ), ಮುನಿರತ್ನ, ಕೆ. ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌.
ಮಂಜುನಾಥ್‌ ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.

ವರ್ಷಾಂತ್ಯಕ್ಕೆ 3 ಲಕ್ಷ ಎಲ್‌ಇಡಿ
ನಗರದಲ್ಲಿ ವರ್ಷಾಂತ್ಯಕ್ಕೆಕನಿಷ್ಠ ಮೂರು ಲಕ್ಷಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಿಗೆ ಪರಿವರ್ತಿಸಬೇಕು. ಜಲಮಂಡಳಿಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್‌ವೆಲ್‌ಗ‌ಳಲ್ಲಿ ಸುಸ್ಥಿತಿಯಲ್ಲಿರುವ ಬೋರ್‌ವೆಲ್‌ಗ‌ಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಮಳೆನೀರು ಚರಂಡಿಗಳ ಕುರಿತಂತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಮುಖ್ಯಮಂತ್ರಿ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next