Advertisement

Bird Flu: ಭಾರತದಲ್ಲಿ ಹಕ್ಕಿಜ್ವರದ 2ನೇ ಪ್ರಕರಣ ದೃಢ: WHO

08:38 PM Jun 12, 2024 | Team Udayavani |

ಕೋಲ್ಕತಾ: 5 ವರ್ಷಗಳ ಬಳಿಕ ಭಾರತದಲ್ಲಿ ಮತ್ತೆ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ 4 ವರ್ಷದ ಮಗುವಿಗೆ ಸೋಂಕು ತಗುಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ.

Advertisement

ಈ ಹಿಂದೆ 2019ರಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲುವ ಮೂಲಕ ಭಾರತದಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಈಗ ಕಳೆದ ಫೆಬ್ರವರಿಯಲ್ಲಿ ಉಸಿರಾಟದ ತೊಂದರೆ, ಜ್ವರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗುವನ್ನು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ 3 ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಈ ಮಗು ವಿಗೂ ಹಕ್ಕಿಜ್ವರವಿತ್ತು ಎಂದು ಡಬ್ಲ್ಯು ಎಚ್‌ಒ ಹೇಳಿದೆ.

ಇದನ್ನೂ ಓದಿ: Tanker Mafia ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ?: ದೆಹಲಿ ಸರ್ಕಾರಕ್ಕೆ ಸುಪ್ರೀಂ ತರಾಟೆ

Advertisement

Udayavani is now on Telegram. Click here to join our channel and stay updated with the latest news.

Next