Advertisement

ಖರ್ಗೆ ರೀತಿ 11 ಬಾರಿ ಗೆದ್ದವರು ಯಾರಿದ್ದಾರೆ?

11:23 PM Feb 10, 2020 | Team Udayavani |

ಚಿತ್ರದುರ್ಗ: ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ 11 ಚುನಾವಣೆಗಳಲ್ಲಿ ಗೆದ್ದಿದ್ದಾರೆ. ಬಿಜೆಪಿಯಲ್ಲಿ ಅಂಥವರು ಯಾರಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್‌. ಮುನಿಯಪ್ಪ ಪ್ರಶ್ನಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಬು ಜಗಜೀವನ್‌ರಾಮ್‌ ಅವರನ್ನು ಬಿಟ್ಟರೆ ನಿರಂತರವಾಗಿ ಗೆಲ್ಲುತ್ತಾ ಬಂದವರು ಮಲ್ಲಿಕಾರ್ಜುನ ಖರ್ಗೆ.

Advertisement

ಬಿಜೆಪಿ ನಾಯಕರಾದ ಅಟಲ್‌ಬಿಹಾರಿ ವಾಜಪೇಯಿ, ಎಲ್‌.ಕೆ. ಅಡ್ವಾಣಿ ಸಹ ಚುನಾವಣೆಗಳಲ್ಲಿ ಸೋತಿದ್ದಾರೆ. ರಾಜಕೀಯದಲ್ಲಿ ಸೋಲು-ಗೆಲುವು ಎರಡೂ ಇರುತ್ತದೆ. ಕಾಂಗ್ರೆಸ್‌ ಸಿದ್ಧಾಂತವನ್ನು ಬದುಕಿನಲ್ಲಿ ಅಳವಡಿಸಿಕೊಂಡಿದ್ದರಿಂದ ಖರ್ಗೆ ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. ರಾಜಕೀಯವಾಗಿ ಮಲ್ಲಿಕಾರ್ಜುನ ಖರ್ಗೆ ಆರಿದ ದೀಪ ಎನ್ನುವರು ಬಹಳ ಚಿಕ್ಕವರು. ಪಕ್ಷದ ನಾಯಕರ ಬಗ್ಗೆ ವೈಯಕ್ತಿಕವಾಗಿ ಮಾತನಾಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.

ಕಟೀಲ್‌ಗೆ ಅನುಭವದ ಕೊರತೆ ಇದೆ. ದಕ್ಷಿಣ ಭಾರತದ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಉತ್ತರ ಭಾರತದಲ್ಲಿ ಒಂದೊಂದೇ ಕಡೆ ಬಿಜೆಪಿ ಸೋಲುತ್ತಿದೆ. ಇತ್ತೀಚಿನ ಎಲ್ಲಾ ಚುನಾವಣೆಗಳನ್ನು ಬಿಜೆಪಿ ಕಳೆದುಕೊಳ್ಳುತ್ತಿದೆ. ಈ ಬಗ್ಗೆ ತಿಳಿದು ಮಾತನಾಡಬೇಕು. ಪ್ರಧಾನಿ ಮೋದಿ ಜಿಎಸ್‌ಟಿ, ನೋಟ್‌ ಬ್ಯಾನ್‌, ಸಿಎಎ, ಎನ್‌ಆರ್‌ಸಿ ಕಾಯ್ದೆ ಜಾರಿಗೊಳಿಸಿ ಹಿಂದೂ-ಮುಸ್ಲಿಮರನ್ನು ವಿಭಜಿಸಿ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮೋದಿಯವರ ಎಲ್ಲಾ ತೀರ್ಮಾನಗಳು ಜನ ವಿರೋಧಿಯಾಗಿವೆ. ಜನತೆ ಮೋದಿಗೆ ಪಾಠ ಕಲಿಸುವ ಸಮಯ ಸನ್ನಿಹಿತವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next