Advertisement

Mood of the Nation; ಯಾರಾಗಬೇಕು ಮೋದಿ ಉತ್ತರಾಧಿಕಾರಿ? ಇಲ್ಲಿದೆ ಸಮೀಕ್ಷೆ ಫಲಿತಾಂಶ

03:14 PM Feb 10, 2024 | Team Udayavani |

ಹೊಸದಿಲ್ಲಿ: 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು 2019ರ ಚುನಾವಣೆಯಲ್ಲಿ ಮತ್ತೆ ಗೆದ್ದು ಅಧಿಕಾರ ಪಡೆದಿತ್ತು. ಇದೀಗ 2024ರ ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಯುತ್ತಿದೆ. ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಭಿಪ್ರಾಯ ಸಂಗ್ರಹದ ಪ್ರಕಾರ ಪ್ರಧಾನಿ ಮೋದಿಯವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆಯಲಿದ್ದಾರೆ.

Advertisement

ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ನರೇಂದ್ರ ಮೋದಿ ಬಳಿಕ ಜನರು ಯಾರನ್ನು ಪ್ರಧಾನಿ ಸ್ಥಾನದಲ್ಲಿ ನೋಡಬಯಸುತ್ತಾರೆ ಎಂದು ಅಭಿಪ್ರಾಯ ಸಂಗ್ರಹಿಸಿದೆ. ಸಮೀಕ್ಷೆಯ ಪ್ರಕಾರ, ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 29 ರಷ್ಟು ಜನರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿಯವರ ಉತ್ತರಾಧಿಕಾರಿಯಾಗಲು ಸೂಕ್ತವೆಂದು ಹೇಳಿದರೆ, ಶೇಕಡಾ 25 ರಷ್ಟು ಜನರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬೆಂಬಲಿಸಿದ್ದಾರೆ.

ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿ 35,801 ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಡಿಸೆಂಬರ್ 15ರಿಂದ ಜನವರಿ 28ರವರೆಗೆ ಈ ಸರ್ವೆ ಮಾಡಲಾಗಿದೆ.

ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್ ಬಳಿಕ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸ್ಥಾನ ಪಡೆದಿದ್ದಾರೆ. ಸಮೀಕ್ಷೆಯಲ್ಲಿ 16 ಪ್ರತಿಶತದಷ್ಟು ಜನರು ನಾಗ್ಪುರ ಸಂಸದ ಗಡ್ಕರಿ ಪರವಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next