Advertisement
ಜೂನ್‌ನಲ್ಲಿ ನಡೆದ ಫೆಡರೇಷನ್ ಕಪ್ ಸಂದರ್ಭದಲ್ಲಿ ರಾಷ್ಟ್ರೀಯ ಉದ್ದೀಪನ ತನಿಖಾ ಸಂಸ್ಥೆ ಪದಕ ಗೆದ್ದ ಅಥ್ಲೀಟ್‌ಗಳಿಂದ ರಕ್ತ ಮತ್ತು ಮೂತ್ರದ ಮಾದರಿ ಪಡೆದಿತ್ತು. ಇದೀಗ ಮನ್‌ಪ್ರೀತ್ ಉದ್ದೀಪನ ಸೇವಿಸಿರುವುದು ಪತ್ತೆಯಾಗಿದೆ. ಮನ್‌ಪ್ರೀತ್ ಕೌರ್ ಫೆಡರೇಷನ್ ಕಪ್, ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಮತ್ತು ಆಂಧ್ರದ ಗುಂಟೂರಿನಲ್ಲಿ ನಡೆದ ಅಂತರ್ ರಾಜ್ಯ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈಗ ಉದ್ದೀಪನ ಮದ್ದು ಸೇವಿಸಿರುವುದು ಪತ್ತೆಯಾಗಿರುವುದರಿಂದ ಪದಕ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಸದ್ಯ ‘ಬಿ’ ಸ್ಯಾಂಪಲ್ ಪರೀಕ್ಷೆಯಲ್ಲೂ ಇವರು ಅನುತೀರ್ಣಗೊಂಡರೆ ಇವರು ನಿಷೇಧದಂತಹ ಕಠಿಣ ಶಿಕ್ಷೆಗೆ ಒಳಗಾಗಬೇಕಾಗಿ ಬರಬಹುದು.
ಮನ್‌ಪ್ರೀತ್ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದರು. ಆದರೆ ಉದ್ದೀಪನ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದರಿಂದ ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ ಎನ್ನಲಾಗಿದೆ. ಈಗಾಗಲೇ ರಾಷ್ಟ್ರೀಯ ಉದ್ದೀಪನ ತನಿಖಾ ಸಂಸ್ಥೆ ಮನ್‌ಪ್ರೀತ್‌ಗೆ ನೋಟಿಸ್ ಕಳುಹಿಸಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್‌ಪ್ರೀತ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.