Advertisement

ಮೋದಿಯಂತಹ ಸಮರ್ಥ ನಾಯಕನನ್ನು ಟೀಕಿಸಲು ಸಿದ್ದು ಯಾರು?: ಎಚ್‌ಡಿಡಿ

10:33 PM Mar 05, 2024 | Team Udayavani |

ಬೆಂಗಳೂರು: ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವವನ್ನು ಟೀಕಿಸಲು ಸಿದ್ದರಾಮಯ್ಯ ಯಾರು? ಮಾತಾಡುವುದಕ್ಕೂ ಇತಿಮಿತಿ ಇರಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಟೀಕಿಸಿದ್ದಾರೆ.

Advertisement

ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್‌ ಸಿಂಗ್‌ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಏನು ಕೊಟ್ಟಿದ್ದಾರೆ ಹೇಳಿ. ಸಿದ್ದರಾಮಯ್ಯನವರೇ ಸತ್ಯ ಹೇಳಿ ಎಂದು ಪ್ರಶ್ನಿಸಿದರು.

ಮುಸ್ಲಿಮರಿಗೆ ಮತ್ತೆ ಮೀಸಲಾತಿ ನೀಡಲಿ
ಬಿಜೆಪಿ ಜತೆ ಜೆಡಿಎಸ್‌ ವಿಲೀನ ಅಂತ ಸಿದ್ದರಾಮಯ್ಯನ ವರೇ ತೀರ್ಮಾನ ಮಾಡಿಬಿಟ್ಟರು. ಜಾತ್ಯತೀತ ಪದ ಬಳಕೆ ಮಾಡುವ ನೈತಿಕತೆ ಜೆಡಿಎಸ್‌ಗೆ ಇಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದರು. ಹಾಗಾದರೆ, ಮುಸ್ಲಿಮರಿಗೆ ನಾನು ಕೊಟ್ಟಿದ್ದ ಶೇ. 4 ಮೀಸಲಾತಿಯನ್ನು ಇವರು ಮತ್ತೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು.

ಫೋನ್‌ ಎತ್ತದ ಕಾರ್ಯದರ್ಶಿ
ಯಾವುದೇ ಕಾಮಗಾರಿಯ ಎಲ್‌ಒಸಿ ನೀಡಬೇಕಾದರೆ ಐದು ಪೈಸೆ ಪಡೆದಿದ್ದೇನೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಸಿದ್ದರಾಮಯ್ಯ ಹೇಳಿದ್ದಾರೆ. 5 ಪೈಸೆ ತಗೊಳ್ಳೋದು ಎಲ್ಲಾದರೂ ಉಂಟೆ? ಅದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುತ್ತ? ಎಂದು ಟೀಕಿಸಿದರು. ನೀರಾವರಿ ಇಲಾಖೆಗೆ ನೀರಾವರಿ ಕಾರ್ಯದರ್ಶಿಯನ್ನು ನೇಮಕ ಮಾಡಿದ್ದಾರೆ. ನಾನು ಫೊನ್‌ ಮಾಡಿದ್ರೆ ಫೋಲ್‌ ರಿಸೀವ್‌ ಮಾಡಲ್ಲ. ನಾನು ಒಂದು ದೇಶದ ಸಣ್ಣ ರಾಜಕಾರಣಿ. ಪಾಪ, ಅವರ ಕಾರ್ಯದರ್ಶಿ ಫೋನ್‌ ತೆಗೆದುಕೊಂಡಿಲ್ಲ. ಅವರು ಸಿದ್ದರಾಮಯ್ಯ ಅವರ ಸಮಾಜದವರು. ಆ ಹಿರಿಯ ಹುದ್ದೆಗೆ ಅತ್ಯಂತ ಕಿರಿಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಿರುವುದು ಏಕೆ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫ‌ಲವಾಗಿದೆ. ಎಲ್ಲ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ.
– ಎಚ್‌. ಡಿ. ದೇವೇಗೌಡ, ಮಾಜಿ ಪ್ರಧಾನಿ

Advertisement
Advertisement

Udayavani is now on Telegram. Click here to join our channel and stay updated with the latest news.

Next