Advertisement

ಚನ್ನಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಯಾರು?

09:34 PM Mar 06, 2023 | Team Udayavani |

ದಾವಣಗೆರೆ: ಲೋಕಾಯುಕ್ತ ಪ್ರಕರಣದಲ್ಲಿ ಸ್ವತಃ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಬಿಜೆಪಿಗೆ ಸಮರ್ಥ ಅಭ್ಯರ್ಥಿಯನ್ನು ಹುಡುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

Advertisement

ಹಾಲಿ ಶಾಸಕರಿದ್ದಾಗಲೂ ಬಿಜೆಪಿಯಿಂದ ತುಕ್ಮೋಸ್ ಮಾಜಿ ಅಧ್ಯಕ್ಷ ಎಚ್‌.ಎಸ್‌. ಶಿವಕುಮಾರ್‌, ನ್ಯಾಯವಾದಿ ಮಂಜಪ್ಪ ಕಾಕನೂರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. 2013ರ ಚುನಾವಣೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಕೆಜೆಪಿ ಜತೆಗೂಡಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಎಚ್‌.ಎಸ್‌. ಶಿವಕುಮಾರ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸೋಲು ಕಂಡಿದ್ದರೂ ಪಕ್ಷ ನಿಷ್ಠೆ ಮೆರೆದಿರುವುದು ಪಕ್ಷದ ನಾಯಕರು ಅವರತ್ತ ಗಮನ ಹರಿಸುವಂತೆ ಮಾಡಿದೆ. ಬಿಜೆಪಿಯಲ್ಲೇ ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿರುವ ಶಿವಕುಮಾರ್‌ ತುಕ್ಮೋಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಪ್ರಬಲ ಸಮುದಾಯದ ಹಿನ್ನೆಲೆಯನ್ನೂ ಹೊಂದಿರುವ ಅವರನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ವಾದವೂ ಇದೆ. ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಮಂಜಪ್ಪ ಕಾಕನೂರು ಬಿಜೆಪಿ ಮುಂದಿರುವ ಇನ್ನೊಂದು ಆಯ್ಕೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next