-ರೇಸ್‌ನಲ್ಲಿ ಯೋಗಿ ಆದಿತ್ಯನಾಥ್, ರಾಜನಾಥ್, ಉಮಾಭಾರತಿ, ಮನೋಜ್ ಸಿನ್ಹಾ
ಉತ್ತರ ಪ್ರದೇಶದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ. ಭಾನುವಾರ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಸಂಸದ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಉಮಾಭಾರತಿ, ಮಹೇಶ್ ಶರ್ಮಾ, ಮನೋಜ್ ಸಿನ್ಹಾ ಸೇರಿದಂತೆ ಹಲವು ಹೆಸರು ಕೇಳಿ ಬರುತ್ತಿವೆ. ಈ ಪೈಕಿ ಹಿಂದುಳಿದ ವರ್ಗದ ಕೇಶವ್ ಪ್ರಸಾದ್ ಮೌರ್ಯ (47) ಹೆಸರು ಮುಂಚೂಣಿಯಲ್ಲಿದೆ. ಜೊತೆಗೆ ಘಾಜಿಪುರ ಕ್ಷೇತ್ರದ ಸಂಸದ ಮನೋಜ್ ಸಿನ್ಹಾ (57) ಹೆಸರು ಬಲವಾಗಿ ಕೇಳಿ ಬರುತ್ತಿದೆ. ಬ್ರಾಹ್ಮಣ ಸಮುದಾಯದ ಇವರಿಗೆ ಸಿಎಂ ಸ್ಥಾನ ನೀಡಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೇಲ್ವರ್ಗದ ಮತ ಸೆಳೆಯಲು ಅನುಕೂಲವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
Advertisement