Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಿನ ಸ್ಥಿತಿಯಲ್ಲಿ ಯಡಿಯೂರಪ್ಪ ಯಾರನ್ನೂ ಸಮಾಧಾನ ಮಾಡೋಕೆ ಆಗಲ್ಲ. ಅದಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಹೇಳಿದರು.
Related Articles
ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಆದಷ್ಟು ಬೇಗ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ. ಮತ್ತೂಮ್ಮೆ ಆ ಬಗ್ಗೆ ಒತ್ತಡ ತರಲಾಗುವುದು.
Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾಗಿದೆ. ದೆಹಲಿ ಚುನಾವಣೆಯಲ್ಲಿ ಹೈಕಮಾಂಡ್ ನಾಯಕರು ಬ್ಯುಸಿ ಇರುವುದರಿಂದ ತಡವಾಗಿರಬಹುದು. ಮತ್ತೂಮ್ಮೆ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಆಡಳಿತ ಯಂತ್ರ ಕುಸಿದಿದ್ದು ಯಾವುದೇ ಅಭಿವೃದ್ಧಿ ಕೆಲಗಳು ಆಗುತ್ತಿಲ್ಲ. ನಮ್ಮ ಸರ್ಕಾರ ಇದ್ದಾಗ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ತಡೆಹಿಡಿಯಲಾಗಿದೆ. ಫೆ.17 ರಿಂದ ಅಧಿವೇಶನ ನಡೆಯಲಿದೆ. ಇದೆಲ್ಲದರ ವಿರುದ್ಧವೂ ಅಧಿವೇಶನದಲ್ಲಿ ಧ್ವನಿ ಎತ್ತಬೇಕಾಗಿದೆ.
ನಮಗೆ ವಿಪಕ್ಷವಾಗಿ ಸರ್ಕಾರವನ್ನು ಎಚ್ಚರಿಸಲು ಅವಕಾಶವಿದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಿಸಿದರೆ ಒಳ್ಳೆಯದು ಎಂದು ತಿಳಿಸಿದರು.ನಮ್ಮಲ್ಲಿ ಕೆಲ ಭಿನ್ನಾಭಿಪ್ರಾಯ ಇರಬಹುದು. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಹೋಗಬೇಕು. ನಮ್ಮ ಮನೆಯಲ್ಲೂ ಸಭೆ ಮಾಡಿದ್ದೆ. ಆಗಲೂ ಭಿನ್ನಾಭಿಪ್ರಾಯ ಬಿಟ್ಟು ಹೋಗೋಣ ಎಂದಿದ್ದೆ. ಎಲ್ಲರೂ ಅದಕ್ಕೆ ಒಪ್ಪಿಕೊಂಡಿದ್ದರು ಎಂದು ಹೇಳಿದರು.