Advertisement
ಏನಿದು ಒಮಿಕ್ರಾನ್ ರೂಪಾಂತರಿ?
Related Articles
Advertisement
ಸಮಾಧಾನಕರ ಸಂಗತಿ!
ಕೊರೊನಾಕ್ಕೆ ಈವರೆಗೆ ಅಭಿವೃದ್ಧಿಪಡಿಸಲಾಗಿರುವ ಎಲ್ಲಾ ಲಸಿಕೆಗಳು ಈ ಹೊಸ ರೂಪಾಂತರಿ ವೈರಾಣುವನ್ನು ಹತ್ತಿಕ್ಕುವಲ್ಲಿ ಶಕ್ತವಾಗಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನು, ಈ ವೈರಾಣುವಿನಿಂದ ಈವರೆಗೆ ಕಂಡಿರದ ಅತಿ ಭೀಕರ ಕೊರೊನಾ ರೋಗ ಉಂಟಾಗುತ್ತದೆ ಎಂಬುದಂತೂ ಸುಳ್ಳು ಎಂದೂ ವಿಜ್ಞಾನಿಗಳು ತಿಳಿಸಿದ್ದಾರೆ. ಇವೆರಡೂ ವಿಚಾರಗಳು, ಹೊಸ ರೂಪಾಂತರಿಯ ಭೀತಿಯ ನಡುವೆಯೂ ಈ ವಿಚಾರ ಸಮಾಧಾನ ಹಾಗೂ ಆತ್ಮವಿಶ್ವಾಸ ತರುವಂಥದ್ದಾಗಿವೆ.
ಕಟ್ಟೆಚ್ಚರ ವಹಿಸಿ: ಕೇಂದ್ರದ ಸೂಚನೆ
ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟೆಚ್ಚರದ ಸೂಚನೆ ರವಾನಿಸಿದೆ. “ವಿದೇಶಗಳಿಂದ, ಅದರಲ್ಲೂ ವಿಶೇಷವಾಗಿ ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಬೇಕು. ಜೊತೆಗೆ, ಸಾರ್ವಜನಿಕರಿಗೆ ನಡೆಸಲಾಗುತ್ತಿರುವ ಪರೀಕ್ಷೆಗಳನ್ನು ಇನ್ನೂ ಹೆಚ್ಚಿ ಮಟ್ಟದಲ್ಲಿ ನಡೆಸಬೇಕು’ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ, ಯಾವ ದೇಶಗಳ ಪ್ರಜೆಗಳಿಗೆ ಕೊರೊನಾ ಪರೀಕ್ಷೆಗಳನ್ನು ಕಡ್ಡಾಯಗೊಳಿಸಬೇಕೆಂದು ಸೂಚಿಸುವ ಪಟ್ಟಿಯನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಯು.ಕೆ. ಸೇರಿದಂತೆ ಎಲ್ಲಾ ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸಾವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ ದೇಶಗಳ ಜೊತೆಗೆ ಈಗ ಹೊಸದಾಗಿ ಹಾಂಕಾಂಗ್, ಇಸ್ರೇಲ್ ರಾಷ್ಟ್ರಗಳನ್ನು ಸೇರಿಸಲಾಗಿದೆ.