Advertisement

Mumbai; ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಇಬ್ಬರು ಕುಸಿದು ಬಿದ್ದು ಮೃತ್ಯು

09:49 PM Jan 21, 2024 | Team Udayavani |

ಮುಂಬೈ: ಮುಂಬೈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಇಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

Advertisement

75 ವರ್ಷದ ರಾಜೇಂದ್ರ ಚಂದಮಲ್ ಬೋರಾ ಎಂದು ಗುರುತಿಸಲಾದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮುಂಬೈನ ಆಜಾದ್ ಮೈದಾನ್ ಪೊಲೀಸರು ಎಡಿಆರ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಮುಂಬೈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ 46 ವರ್ಷದ ಸುವರ್ಣದೀಪ್ ಬ್ಯಾನರ್ಜಿ ಎಂಬ ವ್ಯಕ್ತಿಯೂ ಸಾವನ್ನಪ್ಪಿದ್ದಾರೆ. ವರ್ಲಿಯ ಎನ್‌ಎಸ್‌ಸಿಐ ಬಳಿ ಓಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next