Advertisement

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

11:50 PM Oct 22, 2024 | Team Udayavani |

ಮೈಸೂರು: ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯ ಮುನ್ಸೂಚನೆ ನೀಡಿದರು.

Advertisement

ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರು ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದ ಸಿದ್ಧಾಂತವನ್ನು ಯಾರೇ ಒಪ್ಪಿಕೊಂಡು ಬಂದರೂ ಸ್ವಾಗತಿಸಲಾಗುವುದು. ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ. ಸುರೇಶ್‌ ಹೆಸರು ಕೇಳಿ ಬಂದಿದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವ ಕಾರಣ, ಅವರೇ ಸೂಕ್ತ ಅಭ್ಯರ್ಥಿ ಆಯ್ಕೆಯ ಬಗ್ಗೆ ತೀರ್ಮಾನ ಮಾಡುತ್ತಾರೆ. ಒಟ್ಟಾರೆ ಒಳ್ಳೆಯ ಅಭ್ಯರ್ಥಿ ಹಾಕುವಂತೆ ಹೇಳಿದ್ದೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next