Advertisement

ಯಾರೇ ಸ್ಪರ್ಧಿಸಿದ್ರು ಉತ್ತರ ಗೆಲ್ತೇವೆ

06:33 AM Mar 16, 2019 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹಿತವಾಗಿ  ಮಮತಾ ಬ್ಯಾನರ್ಜಿ, ಮಾಯಾವತಿ, ಚಂದ್ರಬಾಬು ನಾಯ್ಡು, ಸ್ಟಾಲಿನ್‌ ಯಾರೇ ಬಂದು ಸ್ಪರ್ಧಿಸಲಿ ಅಥವಾ ಇವರೆಲ್ಲರೂ ಸೇರಿ ಒಬ್ಬ ಅಭ್ಯರ್ಥಿಯನ್ನು ನಿಲ್ಲಿಸಲಿ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಗೆಲ್ಲುವುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದ ಮೇವಾರ್‌ ಭವನದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಎದುರಾಳಿಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕಳೆದ ಬಾರಿ 2.30 ಲಕ್ಷ ಅಂತರದ ಗೆಲವು ಸಾಧಿಸಿದ್ದೇವೆ. ಈ ಬಾರಿ ಅಂತರದ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದೇವೆ. ಕ್ಷೇತ್ರ ಉಸ್ತುವಾರಿ ಅಶ್ವತ್ಥನಾರಾಯಣ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಮುಂದಾಳತ್ವದಲ್ಲಿ ಚುನಾವಣಾ ತಯಾರಿ ನಡೆಯುತ್ತಿದೆ ಎಂದರು.

ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳ ವಾರ್ಡ್‌ ಸಭೆ ನಡೆಸಿ, 15ರಿಂದ 18 ಸಾವಿರ ಕಾರ್ಯಕರ್ತರನ್ನು ಭೇಟಿ ಮಾಡಲಾಗಿದೆ. ಯಶವಂತಪುರ, ಬ್ಯಾಟರಾಯನಪುರ ಹಾಗೂ ಮಲ್ಲೇಶ್ವರ ಕ್ಷೇತ್ರದ ಕಾರ್ಯಕರ್ತರನ್ನು ಅತಿಶೀಘ್ರದಲ್ಲಿ ಭೇಟಿ ಮಾಡಲಿದ್ದೇವೆ. ಒಟ್ಟಾರೆಯಾಗಿ 25 ಸಾವಿರ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದೇವೆ. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಎಂದರು.

ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರೂ ನಮ್ಮೊಂದಿಗೆ ಬರಬೇಕು. ನಮ್ಮ ಕೆಲಸ ದೇಶದ ಕೆಲಸ. ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸಿದೆ. ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವನಿಗೆ ನವಧಾನ್ಯ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯದ ಉದ್ಘಾಟನೆ ಮಾಡಲಾಯಿತು. ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next