ಹೊಸದಿಲ್ಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮತ್ತು ಮಾರುಕಟ್ಟೆಯಲ್ಲಿ ಹೆಚ್ಚುತ್ತಿದ್ದ ಬೇಡಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ತೆಗೆದುಕೊಂಡಿದ್ದ ಕ್ರಮಗಳಿಗೆ ಸೂಕ್ತ ಸ್ಪಂದನೆ ಸಿಕ್ಕಿದ್ದು, ನವೆಂಬರ್ ತಿಂಗಳ ಸಗಟು ಹಣದುಬ್ಬರ ಇಳಿಕೆಯಾಗಿದೆ.
ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಸಗಟು ಹಣದುಬ್ಬರ ಶೇ. 6ಕ್ಕಿಂತಲೂ ಕಡಿಮೆಯಾಗಿದ್ದು, ನವೆಂಬರ್‌ನಲ್ಲಿ ಶೇ. 5.88ಕ್ಕೆ ತಗ್ಗಿದೆ ಎಂದು ಕೇಂದ್ರ ಸಾಂಖ್ಯಿಕ ಇಲಾಖೆ ತಿಳಿಸಿದೆ.
ನವೆಂಬರ್‌ನಲ್ಲಿ ಹಣದುಬ್ಬರ ಶೇ. 4.91ರಷ್ಟಿತ್ತು. ಆದರೆ ಜಾಗತಿಕ ಆರ್ಥಿಕ ಹಿಂಜರಿತದ ಆತಂಕ, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಜಾಗತಿಕ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತವಾಗಿ ಹಣದುಬ್ಬರ ಈ ವರ್ಷಾರಂಭದಿಂದಲೇ ಏರತೊಡಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ಶೇ. 6.77ರಷ್ಟಿತ್ತು. ಹೀಗಾಗಿ ಆರ್‌ಬಿಐ ರೆಪೋ ದರ ಹೆಚ್ಚಿಸಿ, ಮಾರುಕಟ್ಟೆಯಲ್ಲಿ ಅನಗತ್ಯ ಬೇಡಿಕೆಗೆ ಕಡಿವಾಣ ಹಾಕಿತ್ತು.