ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರಗೋಡ ಗ್ರಾಮದಲ್ಲಿ ಕೇಸರಿ ಧ್ವಜ ತೆರವು ಮಾಡಿರುವುದನ್ನು ಶ್ರೀರಾಮ ಸೇನೆ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದರು.
Advertisement
ಕೇಸರಿ ಧ್ವಜ ಯಾವುದೋ ಪಕ್ಷ, ಸಂಘಟನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಬಂದ ದೇಶದ ಧರ್ಮದ ಧ್ವಜ. ಗ್ರಾಮ ಪಂಚಾಯಿತಿ ಒಮ್ಮತದಿಂದ ಹಾರಿಸಿದ ಧ್ವಜ. ಕೇಸರಿ ತ್ಯಾಗ, ಸಂಸ್ಕೃತಿಯ, ಸಮೃದ್ಧಿಯ ಪ್ರತೀಕ. ಕೇಸರಿ ಧ್ವಜ ಬಿಜೆಪಿ, ಆರ್ಎಸ್ಎಸ್ ಧ್ವಜ ಅಲ್ಲ ಎಂದರು.
Related Articles
Advertisement
ಸಚಿವರ ವಿರುದ್ಧ ವಾಗ್ದಾಳಿ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್, ಸಚಿವರ ಹೇಳಿಕೆಯನ್ನು ನಾನು ಒಪ್ಪಲ್ಲ. ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷರು ಜಾತಿ, ಪಕ್ಷಗಳನ್ನು ಬಿಟ್ಟು, ಒಟ್ಟಾಗಿ ಧ್ವಜ ಹಾರಿಸಿದ್ದರು. ಎಲ್ಲರ ಪರಿಶ್ರಮದಿಂದ 108 ಅಡಿ ಕಂಬ ಹಾಕಲಾಗಿತ್ತು. ಈ ಸರ್ಕಾರ ಇಷ್ಟು ದೊಡ್ಡ ಕಂಬದ ಮೂಲಕ ರಾಷ್ಟ್ರ ಧ್ವಜ ಹಾರಿಸಲ್ಲ. ಮುಸ್ಲಿಂ ವೋಟ್ಗಾಗಿ ಚೆಲುವರಾಯಸ್ವಾಮಿ ಅವರು ರಾಜಕೀಯ ಮಾಡುತ್ತಿದ್ದಾರೆ. ಸುಳ್ಳು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.