Advertisement

ಕೃಷಿ ಮಸೂದೆ ರೈತ ಪರವಾಗಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿತ್ತೆ ?: ರಾಹುಲ್ ಗಾಂಧಿ

04:24 PM Oct 04, 2020 | Mithun PG |

ಪಂಜಾಬ್: ಕೃಷಿಗೆ ಸಂಬಂಧಿಸಿದ ಮಸೂದೆಗಳು ರೈತರ ಪರವಾಗಿದ್ದರೇ ಅಥವಾ ಅವರು ಈ ಕಾಯ್ದೆಯಿಂದ ಸಂತೋಷಿತರಾಗಿದ್ದರೆ, ಯಾತಕ್ಕಾಗಿ ದೇಶಾದ್ಯಂತ ಹೋರಾಟ ಮಾಡುತ್ತಿದ್ದರು ?. ಪಂಜಾಬ್ ನ ಪ್ರತಿ ರೈತರು ಏಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ? ಈ ಮಸೂದೆಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಾದರೇ ಅವರು ವಿರೋಧಿಸುತ್ತಿದ್ದಾರೆ ಎಂದರ್ಥವಲ್ಲವೇ? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Advertisement

ಪಕ್ಷದ ವತಿಯಿಂದ ಪಂಜಾಬ್ ನಲ್ಲಿ ನಡೆಯುತ್ತಿರುವ “ಖೇತಿ ಬಚಾವೋ ಯಾತ್ರಾ” ವನ್ನು ಉದ್ಘಾಟಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಎಂದಿಗೂ ಕೂಡ ಈ ಮಸೂದೆಯಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ದೇವೇಗೌಡರ ಕಾಲದಿಂದಲೂ ಕಣ್ಣೀರು ನಾಟಕವಾಡಿ ಜನರನ್ನು ಸೆಳೆಯುವ ಜೆಡಿಎಸ್: ಸಿದ್ದರಾಮಯ್ಯ

ರೈತರು ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020, ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವಾ ಕಾಯ್ದೆ, 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 – ಈ ಮಸೂದೆಗಳನ್ನು ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಇತ್ತೀಚಿಗೆ ಅಂಗೀಕಾರಗೊಂಡಿದ್ದವು. ಮಾತ್ರವಲ್ಲದೆ ರಾಷ್ಟ್ರಪತಿಗಳ ಅಂಕಿತವೂ ದೊರಕಿತ್ತು. ಈ ಮಸೂದೆಯ ವಿರುದ್ಧ ಇದೀಗ ದೇಶಾದ್ಯಂತ ರೈತರು ಹೋರಾಟ ನಡೆಸುತ್ತಿದ್ದಾರೆ.

ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಮುಕ್ತ ಮಾರುಕಟ್ಟೆ ಈ ದೇಶದ “ಮೂರು ಸ್ತಂಭಗಳು” ಆದರೇ “ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ.
ಇದನ್ನೂ ಓದಿ:  CBI ತನಿಖೆಗೆ ವಿರೋಧ ವ್ಯಕ್ತಪಡಿಸಿದ ಹತ್ರಾಸ್ ಸಂತ್ರಸ್ತೆಯ ಕುಟುಂಬ: ಸ್ಥಳಕ್ಕೆ SIT ಭೇಟಿ !

Advertisement

ಆದರೇ ಕಾಂಗ್ರೆಸ್ ಎಂದಿಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಬೆಂಬಲಿಸುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಈ ಕಪ್ಪು ಕಾಯ್ದೆಗಳನ್ನು (ಕೃಷಿ ಮಸೂದೆ) ಕಿತ್ತೊಗೆಯಲಾಗುವುದು. ಮಾತ್ರವಲ್ಲದೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಟವನ್ನೂ ಮುಂದುವರೆಸುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:  ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಡಿ.ಕೆ. ರವಿ ಪತ್ನಿ ಕುಸುಮಾ

Advertisement

Udayavani is now on Telegram. Click here to join our channel and stay updated with the latest news.

Next