ಮೈಸೂರು : ಮೈಸೂರಿನ ಸುಮಾರು 90 ರಷ್ಟು ದೇವಸ್ಥಾನ ನೆಲಸಮ ಮಾಡುತ್ತಾರಂತೆ, ಬರೀ ಹಿಂದೂ ದೇವಸ್ಥಾನ ಮಾತ್ರ ಟಾರ್ಗೆಟ್ ಮಾಡುತ್ತಿರುವುದು ಯಾಕೆ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ 101 ಗಣಪತಿ ದೇವಸ್ಥಾನದಲ್ಲಿ ಸುದ್ದಿ ಗೋಷ್ಠಿ ನಡೆದಿ ಮಾತನಾಡಿದ ಅವರು, ಜಿಲ್ಲಾಡಳಿತ ಯಾಕೆ ದೇವಸ್ಥಾನಗಳನ್ನು ಮಾತ್ರ ತೆರವು ಮಾಡುತ್ತಿದೆ. ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ
101 ಗಣಪತಿ ದೇಗುಲವನ್ನು ಈ ತಿಂಗಳ 21 ರಂದು ನೆಲಸಮ ಮಾಡುತ್ತೇವೆ ಅಂತ ನೋಟಿಸ್ ನೀಡಿದ್ದಾರೆ. 1955 ರಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದೆ.
ಮಾತೆತ್ತಿದ್ದರೆ ಸುಪ್ರೀಂ ಕೋರ್ಟ್ ಆರ್ಡರ್ ಅಂತಾರೆ. ನಮ್ಮ ಹತ್ತಿರನೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ. ಸುಪ್ರೀಂ ಕೋರ್ಟ್ 2009 ರಲ್ಲಿ ಮಧ್ಯಂತರ ಆದೇಶ ನೀಡಿದೆ. ಎಂಟು ವಾರದೊಳಗೆ ತೀರ್ಪು ಅನುಷ್ಠಾನದ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದೆ. 2009 ಕ್ಕೆ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳನ್ನು ತಲೆ ಎತ್ತಲು ಬಿಡಬೇಡಿ ಅಂತ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಿದ್ದರೂ ಮೈಸೂರಿನ ಕ್ಯಾತಮಾರನ ಹಳ್ಳಿಯಲ್ಲಿ ಮಸೀದಿ ತಲೆ ಎತ್ತಲು ಹೇಗೆ ಬಿಟ್ಡಿದ್ದೀರಾ, ಇದರಿಂದ ರಾಜು ಮರ್ಡರ್ ಆಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : 70ವರ್ಷಗಳಲ್ಲಿ ಕಾಂಗ್ರೆಸ್ ಕಟ್ಟಿದ ದೇಶವನ್ನು,ಬಿಜೆಪಿ 7ವರ್ಷಗಳಲ್ಲಿ ಮಾರಾಟ ಮಾಡಿದೆ: ರಾಹುಲ್