ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಏಕೆ ಮಾಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು.
Advertisement
ಪಟ್ಟಣದ ಜೇಸಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷ ಭಾನುವಾರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಕಾಫಿ ಬೆಳೆಗಾರರಿಗೆ ವಿದರ್ಭ ಪ್ಯಾಕೇಜ್ ನೀಡಿ ಬೆಳೆಗಾರರ ಪರವಾಗಿತ್ತು. ಯುಪಿಎ
ಅವಧಿಯಲ್ಲಿಯೇ ನಾನು ಗೋರಕ್ ಸಿಂಗ್ ಅವರನ್ನು ಮಲೆನಾಡು ಭಾಗಕ್ಕೆ ಕರೆಯಿಸಿ ಅಡಕೆ ಬೆಳೆಗೆ ಇರುವ ರೋಗದ ಕುರಿತು
ಸಾಧಕ ಬಾಧಕ ನೋಡಲು ತಿಳಿಸಲಾಗಿತ್ತು.