Advertisement

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

10:49 AM Apr 23, 2024 | Team Udayavani |

■ ಉದಯವಾಣಿ ಸಮಾಚಾರ
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಏಕೆ ಮಾಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಪ್ರಶ್ನಿಸಿದರು.

Advertisement

ಪಟ್ಟಣದ ಜೇಸಿ ವೃತ್ತದಲ್ಲಿ ಕಾಂಗ್ರೆಸ್‌ ಪಕ್ಷ ಭಾನುವಾರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,
ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಕಾಫಿ ಬೆಳೆಗಾರರಿಗೆ ವಿದರ್ಭ ಪ್ಯಾಕೇಜ್‌ ನೀಡಿ ಬೆಳೆಗಾರರ ಪರವಾಗಿತ್ತು. ಯುಪಿಎ
ಅವಧಿಯಲ್ಲಿಯೇ ನಾನು ಗೋರಕ್‌ ಸಿಂಗ್‌ ಅವರನ್ನು ಮಲೆನಾಡು ಭಾಗಕ್ಕೆ ಕರೆಯಿಸಿ ಅಡಕೆ ಬೆಳೆಗೆ ಇರುವ ರೋಗದ ಕುರಿತು
ಸಾಧಕ ಬಾಧಕ ನೋಡಲು ತಿಳಿಸಲಾಗಿತ್ತು.

ಆದರೆ ನಂತರ ಬಂದ ಬಿಜೆಪಿ ಸರ್ಕಾರ ಗೋರಕ್‌ ಸಿಂಗ್‌ ವರದಿ ಜಾರಿಗೆ ಪ್ರಯತ್ನ ಪಡಲಿಲ್ಲ. ಅಡಕೆ ಅಧ್ಯಯನ ಕೇಂದ್ರ ಕ್ಷೇತ್ರದಲ್ಲಿ ಇದ್ದರೂ ಸಹ ಅದರ ಅಭಿವೃದ್ಧಿಗೆ ಮುಂದಾಗಿಲ್ಲ. ಕ್ಷೇತ್ರದ ಸಂಸದರು ಕೃಷಿ ಸಚಿವರಾಗಿದ್ದರೂ ಸಹ ಇದರ ಪ್ರಯತ್ನಕ್ಕೆ ಕೈಜೋಡಿಸಿಲ್ಲ ಎಂದು ದೂರಿದರು.

ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು. ಶಾಸಕ ಟಿ.ಡಿ.ರಾಜೇಗೌಡ, ಕೆಪಿಸಿಸಿ ವಕ್ತಾರ ಸುಧೀರ್‌ಕುಮಾರ್‌ ಮುರೊಳ್ಳಿ, ಸದಸ್ಯ ಪಿ.ಆರ್‌.ಸದಾಶಿವ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಕೆ.ಪಿ.ಅಂಶುಮಂತ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next