Advertisement

ಸಿಎಂ ಗ್ರಾಮ ವಾಸ್ತವ್ಯ ಯಾಕೆ, ಬರಗಾಲ ಪೀಡಿತ ಪ್ರದೇಶಕ್ಕೆ ತೆರಳಲಿ: ಬಿಎಸ್ ವೈ

10:31 AM Jun 08, 2019 | Nagendra Trasi |

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಗಾಲ ಅಧ್ಯಯನ ಮಾಡುವುದು ಬಿಟ್ಟು ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿಲ್ಲ. ಇದು ಜನರ ಗಮನ ಬೇರೆಡೆ ಸೆಳೆಯುವ ಕುತಂತ್ರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬರಗಾಲ ಪೀಡಿತ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರ, ರೈತರ, ಜಾನುವಾರುಗಳ ಸ್ಥಿತಿಗತಿ ಅರಿಯಬೇಕು. ಶಾಲೆಯಲ್ಲಿ ವಾಸ್ತವ್ಯ ಮಾಡಿದರೆ ಏನು ಪ್ರಯೋಜನ. ಇದು ಜನರ ಗಮನ ಬೇರೆಡೆ ಸೆಳೆಯಲು ಮಾಡುತ್ತಿರುವ ರಾಜಕೀಯ ದೊಂಬರಾಟ. ರೈತರ ಸಾಲ ಮನ್ನಾ ಮಾಡಲಿಲ್ಲ. ರಾಜಕೀಯ ಕಚ್ಚಾಟದಲ್ಲಿಯೇ ತೊಡಗಿದ್ದಾರೆ ಎಂದರು.

ಯಾವುದೇ ಕಾರಣಕ್ಕೂ ಚುನಾವಣೆ ನಡೆಸಲು ಬಿಡಲ್ಲ. ನಾವು 105 ಸ್ಥಾನ ಗೆದ್ದಿದ್ದೇವೆ. ಜನ 5 ವರ್ಷ ಆಡಳಿತ ನಡೆಸಲು ಶಾಸಕರನ್ನು ಆರಿಸಿ ಕಳುಹಿಸಿದ್ದಾರೆ. ಚುನಾವಣೆ ಏನಿದ್ದರೂ 5 ವರ್ಷ ನಂತರ ನಡೆಸುವುದು ಎಂದರು.

ಯಡಿಯೂರಪ್ಪ ಅವರು ಇಂದು ಬಾಗಲಕೋಟೆ ಜಿಲ್ಲೆಯ ಬದಾಮಿ ವಿಧಾನ ಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ಮುಸ್ಟಿಗೇರಿ ಮತ್ತು  ಹಳಗೇರಿ ಗ್ರಾಮಗಳಲ್ಲಿ ಬರ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಗೋವಿಂದ ಕಾರಜೋಳ,  ಪಿ.ಸಿ.ಗದ್ದಿಗೌಡರ, ಶಾಸಕ ಹನುಮಂತ ನಿರಾಣಿ, ಮಾಜಿ ಸಚಿವ ಶ್ರೀ ಲಕ್ಷ್ಮಣ ಸೌದಿ ಹಾಗೂ ಮತ್ತಿತರ ಪಕ್ಷದ ಮುಖಂಡ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next