Advertisement
ಇಂದು ವಿಕಾಸಸೌಧದಲ್ಲಿ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಆಡಳಿತ ಮಂಡಳಿ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ನಿಯಮ ಮೀರಿ ಕಟ್ಟಡ ನಿರ್ಮಿಸಿರುವವರ ವಿರುದ್ಧ ಕ್ರಮಕ್ಕೆ ಈ ಹಿಂದೆಯೇ ಸೂಚಿಸಲಾಗಿತ್ತು. ಬಿಬಿಎಂಪಿಯಿಂದ ಸರ್ವೆ ನಡೆಸಿ, ನಿಯಮ ಉಲ್ಲಂಘಿಸಿರುವ ಕಟ್ಟಡಗಳ ಡೆಮಾಲಿಷನ್‌ಗೆ ಬಿಬಿಎಂಪಿ ಆದೇಶಿಸಿದ್ದರೂ ಕ್ರಮಕ್ಕೆ ತಡವಾಗುತ್ತಿರುವುದೇಕೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಬಿಎಂಪಿ ಆದೇಶದನ್ವಯ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ರಾತ್ರಿ ವೇಳೆ ವಿಮಾನ ಲ್ಯಾಂಡಿಂಗ್ ನೈಟ್ ಲ್ಯಾಂಡಿಂಗ್ ಲ್ಯಾಂಪ್ ಅಳವಡಿಸಲು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದ್ದು, ಆರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಿದರು.
ಗ್ರಾಮೀಣ ಕ್ರೀಡೋತ್ಸವ ಅದ್ದೂರಿಯಾಗಿ ಆಚರಿಸಲು ಸೂಚನೆ
ಇದೇ ವೇಳೆ ಗ್ರಾಮೀಣ ಕ್ರೀಡಾಕೂಟದ ಆಯೋಜನೆ ಬಗ್ಗೆ ಚರ್ಚಿಸಿದರು. ಗ್ರಾಮೀಣ ಕ್ರೀಡಾಕೂಟ ಮುಖ್ಯಮಂತ್ರಿಗಳ ಕನಸಾಗಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ. ಗ್ರಾಮೀಣ ಕ್ರೀಡಾಕೂಟ ಅದ್ದೂರಿಯಾಗಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ಸೂಚಿಸಿದರು. ಅದೇ ದಿನ ಏಕಲವ್ಯ, ಕ್ರೀಡಾ ರತ್ನ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಗುತ್ತದೆ. ಅದಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ, ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆಯ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.