Advertisement
ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಇದ್ದಾಗ ಮೂರು ಬಾರಿ ಸೇನೆ ಸರ್ಜಿಕಲ್ ದಾಳಿ ನಡೆಸಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿ ಕೊಂಡಿದ್ದಾರೆ. ಅದು ನಿಜವೇ ಆಗಿದ್ದರೆ ಸೇನೆಯ ಪರಾಕ್ರಮ ವನ್ನು ಕಾಂಗ್ರೆಸ್ ಯಾವ ಕಾರಣ ಕ್ಕಾಗಿ ಮುಚ್ಚಿ ಟ್ಟಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ರಾಜಕೀಯದಲ್ಲಿ ಅಪನಂಬಿಕೆ ಎಂಬ ಸಮಸ್ಯೆ ಸೃಷ್ಟಿಸಿದೆ. ಆ ಪಕ್ಷದ ನಾಯಕರು ಹೇಳುವ ಮಾತಿಗೆ ಮತ್ತು ನಡೆದುಕೊಳ್ಳುವ ರೀತಿಗೆ ವ್ಯತ್ಯಾಸವಿದೆ ಎಂದಿದ್ದಾರೆ. ಕಾಂಗ್ರೆಸ್‌ಗೆ ಚುನಾ ವಣೆ ವೇಳೆ ಮಾತ್ರ ದೇಗುಲ, ಗೋವು ಗಳು ನೆನಪಾ ಗುತ್ತವೆ. ಆದರೆ ಬಿಜೆಪಿಗೆ ಅವು ಗ ಳು ಜೀವನಾಡಿ ಎಂದೂ ಹೇಳಿದ್ದಾರೆ ರಾಜನಾಥ್.
Related Articles
Advertisement
ತಪ್ಪೊಪ್ಪಿಕೊಂಡ ಆಯೋಗಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿನ ಸಿಸಿಟಿವಿ ಕ್ಯಾಮೆರಾಗಳು ವಿದ್ಯುತ್ ಕಡಿತದಿಂದಾಗಿ ಒಂದು ಗಂಟೆ ಕಾಲ ಕಾರ್ಯನಿರ್ವಹಿಸಲಿಲ್ಲ ಎಂಬ ಅಂಶವನ್ನು ಕೇಂದ್ರ ಚುನಾವಣಾ ಆಯೋಗ ಒಪ್ಪಿಕೊಂಡಿದೆ. ನ.30 (ಶುಕ್ರವಾರ) ಈ ಘಟನೆ ನಡೆದಿದೆ. ಈ ಬಗ್ಗೆ ಭೋಪಾಲ ಜಿಲ್ಲಾಧಿಕಾರಿ ಕಚೇರಿಯಿಂದ ವರದಿ ತರಿಸಿಕೊಳ್ಳಲಾಗಿದ್ದು, ಅದರಲ್ಲಿ ಈ ಅಂಶ ಪ್ರಸ್ತಾಪವಾಗಿದೆ. ಆದರೆ ಈಗ ಸ್ಟ್ರಾಂಗ್ ರೂಮ್‌ನಲ್ಲಿ ಸಿಸಿ ಕ್ಯಾಮೆರಾಗಳು ಕಾರ್ಯವೆಸಗುತ್ತಿವೆ ಎಂದಿದೆ ಆಯೋಗ. ಈ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪವೆತ್ತಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಾಲ್ಯವಿವಾಹ ತಡೆಯಲ್ಲ
ರಾಜಸ್ಥಾನ ವಿಧಾನಸಭೆ ಚುನಾವಣೆ ಪ್ರಚಾರ ವೇಳೆ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಚೌಹಾಣ್ ಪ್ರಚಾರ ಸಭೆಯಲ್ಲಿ ಮಾತನಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಹಾಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಉಳಿಸಿಕೊಂಡರೆ ತಮ್ಮ ಕ್ಷೇತ್ರದಲ್ಲಿ ನಡೆಯುವ ಬಾಲ್ಯ ವಿವಾಹಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳುವುದಾಗಿ ವಾಗ್ಧಾನ ಮಾಡಿದ್ದಾರೆ. ಪಿಪಾಲಿಯಾ ಕಾಲಾ ಎಂಬಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.