Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಬೊಮ್ಮಾಯಿ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರೇ ಮುಂದಿನ ಚುನಾವಣೆ ಅನ್ನು ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿದುವ ಕುರಿತು ಹೇಳಿದ್ದಾರೆ. ಇದೇ ಮಾತನ್ನು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈಗಾಗಿ ಸಿಎಂ ಬದಲಾವಣೆ ಮಾತು ಊಹಾಪೋಹ. ಸಿಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಮುಂದಿನ 2023 ರ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಗಿಮಿಕ್ ರಾಜಕಾರಣ ಮಾಡುತ್ತಿದೆ. ಬುಎಸ್ ವೈ ಸಿಎಂ ಆಗಿದ್ದಾಗ ಹಾಗೂ ಈಗಿನ ಸಿಎಂ ಬೊಮ್ಮಾಯಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ ನಡೆಸಿ ಎಲ್ಲಾ ಹಂತದ ಪ್ರಕ್ರಿಯೆ ಮುಗಿಸಿದ್ದಾರೆ. ಶೀಘ್ರದಲ್ಲಿಯೇ ಯೋಜನೆಗೆ ಒಪ್ಪಿಗೆ ಸಿಗುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು. ಮುಖ್ಯಮಂತ್ರಿ ಆಗುವ ಕನಸು ಕಾಣುವುದನ್ನು ಬಿಡಬೇಕು. ಶಾಶ್ವತ ಮುಖ್ಯಮಂತ್ರಿ ಚಂದ್ರು ರೀತಿ ಅವರು ಕನಸು ಕಾಣಬೇಕು ಎಂದು ವ್ಯಂಗ್ಯವಾಡಿದರು.
Related Articles
Advertisement
ಬಿಜೆಪಿ ಅಭ್ಯರ್ಥಿ ಸೋಲಿಗೆ ಯಾವುದೇ ಒಳ ಏಟಿಲ್ಲ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಮುಖಂಡರು ಕೆಲಸ ಮಾಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಬಂದ್ ಕೈಬಿಡಲು ಮನವಿಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕೈಬಿಡುವಂತೆ ಸಚಿವರು ಮನವಿ ಮಾಡಿದರು. ಬೆಳಗಾವಿ ಅಧಿವೇಶನದಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ಪಕ್ಷಾತೀತವಾಗಿ ಖಂಡಿಸಲಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಣಯ ಮಾಡಿರುವುದರಿಂದ ಬಂದ್ ಆಚರಿಸುವುದು ಅಗತ್ಯವಿಲ್ಲ ಎಂದು ಹೇಳಿದರು.