Advertisement

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

11:41 PM Sep 24, 2023 | Team Udayavani |

ಬೆಂಗಳೂರು: “ನಾನು ಮುಸ್ಲಿಂ ಸಮುದಾಯದ ಜತೆ ನಿಂತಿದ್ದೆ. ಆದರೆ ಆ ಸಮುದಾಯ ಜೆಡಿಎಸ್‌ ಜತೆ ನಿಲ್ಲಲಿಲ್ಲ’ ಎಂದು ಹೇಳಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್‌ ಅಹಮದ್‌ ಖಾನ್‌ ವಾಗ್ಧಾಳಿ ನಡೆಸಿದ್ದಾರೆ. ಅಂತ ಹೇಳಿಕೆ ನೀಡಿರುವ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಇವರು ಗೆಲ್ಲುತ್ತಿ ದ್ದರೇ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು. ಹೊಳೆನರಸೀಪುರದಲ್ಲಿ ಎಚ್‌.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್‌ ಬಾಬು, ಗುರುಮಿಠಕಲ್‌ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ನೋಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಹಾಕದಿರುತ್ತಿದ್ದರೆ ಎಚ್‌ಡಿಕೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್‌ಗೆ ಮತ ಹಾಕಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5ರಿಂದ 6 ಸ್ಥಾನಗಳಷ್ಟೇ ಬರುತ್ತಿತ್ತು ಎಂದರು.

ಬಿಜೆಪಿ ಜತೆ ಹೋಗುವ ಉದ್ದೇಶ ಇಟ್ಟುಕೊಂಡೇ ಕುಮಾರಸ್ವಾಮಿ ಮುಸ್ಲಿಮರು ಮತ ಕೊಡಲಿಲ್ಲ ಎಂದು ಹೇಳಿರುವುದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಇದ್ದವರು. ಆದರೆ ಕುಮಾರಸ್ವಾಮಿ ತಮ್ಮ ರಾಜಕಾರಣಕ್ಕೆ ಗೌಡರ ತತ್ವ ಸಿದ್ಧಾಂತವನ್ನೇ ಬಲಿ ಕೊಟ್ಟಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next