ಹಾವೇರಿ: ರಾಜ್ಯಾದ್ಯಂತ ಸಮಾವೇಶ ಮಾಡುತ್ತಿದ್ದು, ನಮಗೆ ಜನರಿಂದ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಜನರ ಉತ್ಸಾಹ ಇಮ್ಮಡಿಯಾಗಿದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಜನ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಸಿದ ಅವರು, ಇದು ಕೊಳಕು ಮನಸ್ಸಿನ ಮನಸ್ಥಿತಿ. ಒಂದು ಸಮಗ್ರವಾಗಿ ಇರುವ ಪರಂಪರೆ ಬಗ್ಗೆ ಪದೇ ಪದೇ ಕೆಣಕುವುದು, ಅವಮಾನ ಅಪಮಾನ ಮಾಡೋದು ಎಷ್ಟು ಸರಿ? ಅಲ್ಲಿ ಅವರ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡ್ತಿದ್ದಾರೆ. ಆದರೆ ಇಲ್ಲಿ ಇಂಥ ಹೇಳಿಕೆ ಕೊಟ್ಟು ಇವರು ಭಾರತ್ ತೋಡೋ ಮಾಡುತ್ತಿದ್ದಾರೆ. ಇದು ಭಾರತ ಒಡೆಯುವ ಸಂಚಿನ ಮನಸ್ಥಿತಿ. ಅವರ ಆಡಳಿತ, ಅವರ ನೀತಿಯಿಂದಲೇ ದೇಶಕ್ಕೆ ಆಂತರಿಕ ಧಕ್ಕೆ ಬಂದಿದೆ. ಅರಾಜಕತೆ ಹುಟ್ಟಿಸಿ ಅಧಿಕಾರಕ್ಕೆ ಬರುವ ಮನಸ್ಥಿತಿ ಇವರದ್ದು ಯಾಕೆ ಸಿದ್ದರಾಮಯ್ಯ ಇನ್ನೂ ಮಾತಾಡಿಲ್ಲ? ಇದಕ್ಕೆ ರಾಹುಲ್ ಗಾಂಧಿ ಅಭಿಪ್ರಾಯ ಏನು? ಕಾರ್ಯಾದ್ಯಕ್ಷರ ಹೇಳಿಕೆಗೆ ಕ್ರಮ ಜರುಗಿಸುತ್ತಾರಾ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಬೊಮ್ಮಾಯಿ ಪ್ರಶ್ನಿಸಿದರು.
ಇದನ್ನೂ ಓದಿ:Rare Love Story… ವಿದ್ಯಾರ್ಥಿಯನ್ನ ವಿವಾಹವಾಗಲು ಲಿಂಗ ಬದಲಾಯಿಸಿಕೊಂಡ ಶಿಕ್ಷಕಿ!
ಬಿಜೆಪಿಯನ್ನು ಮನೆಗೆ ಕಳಿಸುವ ಸಂಕಲ್ಪ ಜನ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ, ಸಿದ್ದರಾಮಯ್ಯ ಹೇಳಿದ್ದು ಯಾವುದಾಗಿದೆ? ಅವರಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಅಂದಿದ್ದರು, ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದಿದ್ದರು ಯಾವುದಾದರೂ ಆಗಿದೆಯಾ? ಮತ್ತೆ ನಾನೇ ಸಿಎಂ ಅಂದರು ಆದರೆ ಸಿಎಂ ಆದರಾ? ಅವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ ನೀವೂ ತಲೆ ಕೆಡಿಸಿಕೊಳ್ಳಬೇಡಿ. ಸಿದ್ದರಾಮಯ್ಯ ಅವರು ಹಿಂದೆ ಜನಾಶೀರ್ವಾದ ಯಾತ್ರೆ ಮಾಡಿದರು. ಆದರೆ ಜನ ಅವರಿಗೆ ಆಶೀರ್ವಾದ ಮಾಡಲಿಲ್ಲ. ಅವರ ದುರಾಡಳಿತದಿಂದ ಜನ ಅವರನ್ನು ತಿರಸ್ಕಾರ ಮಾಡಿದರು ಎಂದು ಹೇಳಿದರು.